ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬರಲು ಸಲಹೆ

ಗುರುವಾರ , ಜೂನ್ 27, 2019
23 °C

ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬರಲು ಸಲಹೆ

Published:
Updated:
Prajavani

ಚನ್ನಪಟ್ಟಣ: ‘ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬಂದು, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ಹೇಳಿದರು.

ತಾಲ್ಲೂಕಿನ ಅಪ್ಪಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಸೋಮವಾರ ಆಯೋಜಿಸಿದ್ದ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಪ್ರತಿಭಾವಂತರ ಸಂಖ್ಯೆ ಹೆಚ್ಚಾಗಿದೆ. ಸೂಕ್ತ ಮಾರ್ಗದರ್ಶನವನ್ನು ಶಿಕ್ಷಣದ ಮೂಲಕ ನೀಡಿದಾಗ ಮಕ್ಕಳು ಉನ್ನತ ಮಟ್ಟಕ್ಕೆ ಸಾಗುತ್ತಾರೆ. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದರು.

ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ಮಾತನಾಡಿ ‘ಮಕ್ಕಳು ಉತ್ತಮ ಶಿಕ್ಷಣ ಪಡೆಯುವಲ್ಲಿ ಪೋಷಕರ ಪಾತ್ರ ಮಹತ್ತರವಾದುದು. ಪೋಷಕರು ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕು’ ಎಂದು ಹೇಳಿದರು.

ಬಿ.ಎಸ್.ಎನ್.ಎಲ್. ನಿವೃತ್ತ ಅಧಿಕಾರಿ ವೆಂಕಟಾಚಲಯ್ಯ ಮಾತನಾಡಿ ‘ಮಕ್ಕಳು ಶಿಸ್ತನ್ನು ಮೈಗೂಡಿಸಿಕೊಂಡಾಗ ಜ್ಞಾನದ ಅರಿವು ವಿಸ್ತಾರಗೊಳ್ಳುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು’ ಎಂದರು.

ಮಕ್ಕಳಿಗೆ ನೋಟ್ ಬುಕ್, ಬ್ಯಾಗ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಯಶೋಧಮ್ಮ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಕೆಂಪರಾಜು, ಶಿಕ್ಷಕ ಎ.ಜಿ.ಜಯರಾಂ, ಗ್ರಾಮದ ಮುಖಂಡರಾದ ವೆಂಕಟರಮಣಯ್ಯ, ಮುನಿಯಪ್ಪ, ನಾರಾಯಣ, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟರಾಮು, ಲಕ್ಷ್ಮಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಬ್ಬಲಕ್ಷ್ಮಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !