ರಕ್ತದಾನ ಮಾಡಲು ಸಲಹೆ

ಬಿಡದಿ: ರೋಟರಿ ಸೆಂಟ್ರಲ್ ಹಾಗೂ ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಸೋಮವಾರ ರಕ್ತದಾನ ಶಿಬಿರ ನಡೆಯಿತು. ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಶಿಬಿರ ಉದ್ಘಾಟಿಸಿದ ಜ್ಞಾನವಿಕಾಸ ವಿದ್ಯಾಸಂಸ್ಥೆಯ ಎಲ್. ಸತೀಶ್ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ಸೇವೆ ಮಾಡುವ ಜೊತೆಗೆ ರಕ್ತದಾನ ಮಾಡಬೇಕು. ಇದಕ್ಕೆ ರೋಟರಿ ಸಂಸ್ಥೆಯು ಸಹಕಾರ ನೀಡಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆವಹಿಸಿದ್ದ ಮುಖಂಡ ನಟರಾಜ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಲು ವಿದ್ಯಾರ್ಥಿ ಜೀವನದಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಿದರೆ ನೊಂದ ಜೀವಗಳಿಗೆ ಆಸರೆಯಾಗಲಿದೆ. ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಾನ ಮಾಡಿದರೆ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂದು
ಹೇಳಿದರು.
ರೋಟರಿ ಅಧ್ಯಕ್ಷ ವಸಂತಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಲ್ಲೇಶ್, ರೋಟೆರಿಯನ್ ಆನಂದ್, ರಮೇಶ್, ಶಿವಣ್ಣ, ಲೋಕೇಶ್, ಶಂಕರಣ್ಣ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಿ. ರೂಪಾ ಹಾಗೂ ಉಪನ್ಯಾಸಕರು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.