ರಾಮನಗರ: ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲೇ ಬೆಂಗಳೂರಿನ ಮಹಿಳೆಯೊಬ್ಬರಿಗೆ ಭ್ರೂಣಲಿಂಗ ಪತ್ತೆ ಮಾಡಿರುವ ಆರೋಪ ಕೇಳಿ ಬಂದಿದೆ.

ಆರೋಪದ ಬೆನ್ನಲ್ಲೇ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ತಡೆ (ಪಿಸಿ ಆ್ಯಂಡ್ ಪಿಎನ್ಡಿಟಿ) ಕಾರ್ಯಕ್ರಮದ ಉಪ ನಿರ್ದೇಶಕ ಡಾ. ವಿವೇಕ್ ದೊರೈ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸ್ಕ್ಯಾನಿಂಗ್ ವಿಭಾಗದ ರೇಡಿಯಾಲಜಿಸ್ಟ್ ಡಾ. ಶಶಿ ಹಾಗೂ ಇತರ ಸಿಬ್ಬಂದಿಯನ್ನು ಸಹ ವಿಚಾರಣೆ ನಡೆಸಿ ಹೇಳಿಕೆ ಪಡೆದಿರುವ ಡಾ. ವಿವೇಕ್, ಭ್ರೂಣಪತ್ತೆಗೆ ಬಳಸಿದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಸಿ. ಮಂಜುನಾಥ್ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಅವರು, ಆರೋಪದ ತನಿಖೆ ಮುಗಿಯುವವರೆಗೆ ಯಂತ್ರವನ್ನು ಬಳಸಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಪತಿ ಜೊತೆ ಬಂದಿದ್ದರು: ‘ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯ ಮಹಿಳೆಗೆ ಇಬ್ಬರು ಪುತ್ರಿಯರಿದ್ದಾರೆ. ಕಳೆದ ವಾರ ಪತಿಯೊಂದಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾರೆ. ಮಹಿಳೆಗೆ ಆಶಾ ಕಾರ್ಯಕರ್ತೆಯೊಬ್ಬರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

‘ಮಹಿಳೆ, ಜಿಲ್ಲಾ ಆಸ್ಪತ್ರೆಯ ರೇಡಿಯಾಲಜಿಸ್ಟ್, ಸ್ಕ್ಯಾನಿಂಗ್ ವಿಭಾಗದ ಸಿಬ್ಬಂದಿ ನೀಡಿರುವ ಹೇಳಿಕೆ, ಸ್ಕ್ಯಾನಿಂಗ್ ವರದಿ ಜೊತೆಗೆ ಮಹಿಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಜಾಗ ಹಾಗೂ ಅವರಿಗೆ ನೆರವಾಗಿರುವವರ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಒಂದೆರಡು ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದ್ದು, ಬಳಿಕ ಪ್ರಕರಣ ದಾಖಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಡಾ. ವಿವೇಕ್ ದೊರೈ ಅವರಿಗೆ ‘ಪ್ರಜಾವಾಣಿ’ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಸಂದೇಶಕ್ಕೂ ಪ್ರತಿಕ್ರಿಯಿಸಲಿಲ್ಲ.

ಘಟನೆ ಗೊತ್ತಾಗಿದ್ದು ಹೇಗೆ?

ಗರ್ಭದಲ್ಲಿರುವುದು ಹೆಣ್ಣು ಭ್ರೂಣ ಎಂದು ಗೊತ್ತಾದ ಬಳಿಕ ಮಹಿಳೆ ಭ್ರೂಣ ತೆಗೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಗೆ ವಿಪರೀತ ರಕ್ತಸ್ರಾವವಾಗಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಆಗ ಕುಟುಂಬದವರು ವಾಣಿವಿಲಾಸ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ರಕ್ತಸ್ರಾವದ ಕುರಿತು ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಮೂಲಕ ಭ್ರೂಣ ತೆಗೆಯಲಾಗಿದೆ ಎಂಬುವುದು ಗೊತ್ತಾಗಿದೆ. ವೈದ್ಯರು ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾರ್ಯಕ್ರಮದ ಉಪ ನಿರ್ದೇಶಕ ಡಾ.ವಿವೇಕ್ ದೊರೈ ಅವರಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಡಾ. ವಿವೇಕ್ ಮಹಿಳೆಯನ್ನು ವಿಚಾರಿಸಿದಾಗ ಭ್ರೂಣಲಿಂಗ ಪತ್ತೆಗೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದಾಗಿ ತಿಳಿಸಿದ್ದರು. ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.