ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವನಿವರ್ಧಕ ಹಾವಳಿ ವಿದ್ಯಾರ್ಥಿಗಳಿಗೆ ನಿತ್ಯವೂ ಕಿರಿಕಿರಿ

Last Updated 24 ಏಪ್ರಿಲ್ 2022, 7:24 IST
ಅಕ್ಷರ ಗಾತ್ರ

ಮಾಗಡಿ: ಪಟ್ಟಣದಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯಲ್ಲಿ ಮುಳುಗಿದ್ದಾರೆ. ಆದರೆ, ಅವರ ಓದಿಗೆ ನಿತ್ಯವೂ ದೇವಾಲಯಗಳ ಧ್ವನಿವರ್ಧಕಗಳು ಕಂಟಕವಾಗಿ ಪರಿಣಮಿಸಿವೆ.

ಇಲ್ಲಿನ ತಿರುಮಲೆ ರಂಗನಾಥ ಸ್ವಾಮಿ ಮತ್ತು ಇತರೆ ದೇವಾಲಯಗಳಲ್ಲಿ ಪ್ರತಿದಿನ ಮುಂಜಾನೆ 4 ಗಂಟೆಗೆ ಜೋರಾಗಿ ಧ್ವನಿವರ್ಧಕ ಹಾಕುತ್ತಾರೆ. ಇಡೀ ವರ್ಷವೆಲ್ಲ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿರುವ ನಮ್ಮ ಮಕ್ಕಳಿಗೆ ಪರೀಕ್ಷೆ ಸಮಯದಲ್ಲಿ ಓದಿಕೊಳ್ಳಲು ತೊಂದರೆಯಾಗುತ್ತಿದೆ. ದೇವಾಲಯದ ಆಡಳಿತ ಮಂಡಳಿಯವರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇಲ್ಲ ಎಂದು ಪೋಷಕರು ದೂರಿದ್ದಾರೆ.

ಮತ್ತೊಂದೆಡೆ ತಿರುಮಲೆ ಸಮೀಪದ ವೆಂಗಳಪ್ಪನತಾಂಡ ಬಳಿಯ ಬೆಟ್ಟದಲ್ಲಿ ಕ್ರಷರ್‌ಗಳು ಇಡೀ ರಾತ್ರಿ ಕಲ್ಲುಪುಡಿ ಮಾಡುತ್ತವೆ. ಇದರಿಂದ ಶಬ್ದಮಾಲಿನ್ಯ ಹೆಚ್ಚಿದೆ. ಸುಪ್ರೀಂ ಕೋರ್ಟ್‌ ನಿಯಮ ಉಲ್ಲಂಘಿಸಿ ನಿಗದಿತ ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಧ್ವನಿವರ್ಧಕ ಬಳಸಲಾಗುತ್ತಿದೆ. ಕನಿಷ್ಠ ಪರೀಕ್ಷೆ ಮುಗಿಯುವವರೆಗೂ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹಾಗೂ ತಹಶೀಲ್ದಾರ್‌ ಅವರು ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ತೊಂದರೆ ಯಾಗ ದಂತೆ ಕ್ರಮಕೈಗೊಳ್ಳಬೇಕಿರುವುದು ದೇವಾಲಯದ ಆಡಳಿತ ಮಂಡಳಿಯ ಹೊಣೆಯಾಗಿದೆ. ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ಬಗ್ಗೆ ಜಿಲ್ಲಾಧಿಕಾರಿ ಅವರು ಕಠಿಣ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

‘ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದೆ. ಪರೀಕ್ಷಾ ಸಮಯದಲ್ಲಿ ತಿರುಮಲೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಿತ್ಯ ಮುಂಜಾನೆ 4 ಗಂಟೆಯಿಂದ ಬೆಳಿಗ್ಗೆ 7 ಗಂಟೆ ತನಕ ಧ್ವನಿವರ್ಧಕ ಬಳಸುತ್ತಿರುವುದರಿಂದ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಈ ಹಾವಳಿ ತಪ್ಪಿಸಬೇಕು’ ಎಂದು ಪೋಷಕ ಹನುಮಂತಯ್ಯ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT