ಗುರುವಾರ , ಮೇ 13, 2021
39 °C

ಚನ್ನಪಟ್ಟಣ: ಅಂಬೇಡ್ಕರ್ ಜೀವನ ಅನುಕರಣೀಯ -ವಿಜಯ್ ರಾಂಪುರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಸಮ ಸಮಾಜದ ನಿರ್ಮಾಣಕ್ಕೆ ಸಮರೋಪಾದಿಯಲ್ಲಿ ಹೋರಾಟ ಕೈಗೊಂಡು, ಭಾರತೀಯರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಅನುಕರಣೀಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.

ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಅವರ ಶೋಷಿತರ ಪರವಾದ ನಿಲುವು, ಮಹಿಳಾ ಸಬಲೀಕರಣದ ತುಡಿತ, ಮಾನವೀಯ ಮೌಲ್ಯ, ಆರ್ಥಿಕ ಮತ್ತು ಸಾಮಾಜಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ತನ್ನ ಇಡೀ ಬದುಕನ್ನು ಸಮಾಜಕ್ಕೆ ಮೀಸಲಿರಿಸಿದ ಈ ಯುಗಪುರುಷನ ಆಶಯಗಳನ್ನು ಪೋಷಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ ಎಂದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ವ್ಯವಸ್ಥಾಪಕ ಶ್ರೀಹರ್ಷ ಕುಲಕರ್ಣಿ ಮಾತನಾಡಿ, ವಿಶ್ವ ಶ್ರೇಷ್ಠ ಅಂಬೇಡ್ಕರ್ ಅವರ ಕ್ರಿಯಾಶೀಲತೆ, ಹೋರಾಟದ ಮನೋಭಾವ, ಬದ್ಧತೆ, ಪ್ರಾಮಾಣಿಕತೆ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಜನಪದ ಗಾಯಕ ಚೌ.ಪು. ಸ್ವಾಮಿ, ಮುಖಂಡ ಟಿ. ಅಪ್ಪಾಜಿ, ಗಾಯಕರಾದ ಎಂ.ಆರ್. ಸುಶೀಲಮ್ಮ, ಎಂ.ಎ. ತುಳಸೀಧರ, ಸುದರ್ಶನ್ ಹಾಜರಿದ್ದರು. ಕ್ರಾಂತಿ ಗೀತೆಗಳನ್ನು ಹಾಡಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.