ಮಾಗಡಿ: ‘ಸಮಾಜದ ಕಟ್ಟಕಡೆಯ ಪ್ರಜೆಗೂ ಶಾಸನ ರೂಪಿಸುವ ರಾಜಕೀಯದ ಹಕ್ಕು ಕೊಟ್ಟಿರುವ ಮಹಾ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎ. ಮಂಜುನಾಥ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130 ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್ ಕಚೇರಿ ಮುಂದೆ ಶೀಘ್ರವೇ ಅಂಬೇಡ್ಕರ್ ಪುತ್ಥಳಿ ನಿರ್ಮಿಸುತ್ತೇವೆ. ಅಂಬೇಡ್ಕರ್ ಭವನದ ಆಸುಪಾಸಿನಲ್ಲಿಯೇ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಭವನಕ್ಕೆ ನಿವೇಶನ ನೀಡಿ ಸುಸಜ್ಜಿತ ಕಟ್ಟಡ ಕಟ್ಟಿಸಲಾಗುವುದು. ಪುರಸಭೆಯಿಂದ ಬಿ.ಕೆ. ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಂಬೇಡ್ಕರ್ ರಸ್ತೆ ಎಂದು ಶೀಘ್ರವೇ ನಾಮಫಲಕ ಹಾಕಿಸಲಾಗುವುದು. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಅಗತ್ಯ ಸವಲತ್ತು ನೀಡಲಾಗುವುದು ಎಂದು ಹೇಳಿದರು.

ಕೊರೊನಾ ಎರಡನೇ ಅಲೆ ಎದುರಿಸಲು ಸರ್ವರೂ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು. 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಿಸಲು ಎಲ್ಲರೂ ಸಹಕರಿಸಬೇಕು ಎಂದರು.

ದಲಿತ ಮುಖಂಡ ಗೋಪಾಲಕೃಷ್ಣ ಮಾತನಾಡಿ, ಅಂಬೇಡ್ಕರ್ ಭವನಕ್ಕೆ ಮೂಲಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು. ಶಾಸಕ ಮಂಜುನಾಥ ಪ್ರತಿಕ್ರಿಯಿಸಿ, ಶಾಸಕರ ನಿಧಿಯಿಂದ ಅಂಬೇಡ್ಕರ್ ಭವನ ದುರಸ್ತಿಪಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ ನಾರಾಯಣಪ್ಪ, ಸದಸ್ಯ ಕಾಂತರಾಜ್, ಜಿಲ್ಲಾ ಜಾಗೃತ ಸಮಿತಿ ಸದಸ್ಯ ದೊಡ್ಡಯ್ಯ, ಜಿಲ್ಲಾ ಎಬಿವಿಪಿ ಸಂಚಾಲಕ ಶಂಕರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಕೃಷ್ಣ, ಕುದೂರು ಗ್ರಾ.ಪಂ ಅಧ್ಯಕ್ಷೆ ಭಾಗ್ಯಮ್ಮ ಚಿಕ್ಕರಾಜು, ದಲಿತ ಮುಖಂಡರಾದ ಕಲ್ಕೆರೆ ಶಿವಣ್ಣ, ಎಸ್.ಜಿ. ವನಜಾ, ದೊಡ್ಡಿಲಕ್ಷಣ್, ಮಂಜೇಶ್ ಕುಮಾರ್, ತೋಟದ ಮನೆ ಗಿರೀಶ್, ಕಲ್ಲುದೇವನಹಳ್ಳಿ ಮಹದೇವ್, ಜೀವಿಕ ಗಂಗಹನುಮಯ್ಯ, ಹಳ್ಳಿಮನೆ ಹನುಮಂತಯ್ಯ, ಶ್ರೀನಿವಾಸ್, ತುಕಾರಾಂ, ಗೋಪಾಲ್, ಕೋರಮಂಗಲ ಶ್ರೀನಿವಾಸ್, ವೆಂಕಟರಮಣ ಭೋವಿ, ಹೊಸಪೇಟೆ ರಂಗಸ್ವಾಮಿ, ಎಲ್.ಎನ್. ಸ್ವಾಮಿ, ರಾಘವೇಂದ್ರ, ಗ್ರಾ.ಪಂ ಸದಸ್ಯ ಬಸವಲಿಂಗಯ್ಯ, ತಹಶೀಲ್ದಾರ್ ಬಿ.ಜಿ. ಶ್ರೀನಿವಾಸ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಇಒ ಟಿ. ಪ್ರದೀಪ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನರಸಿಂಹಯ್ಯ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೆಶಕ ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರಸ್ವಾಮಿ ಇದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ರಚಿಸಿರುವ ಸಂವಿಧಾನ ಓದು ಪುಸ್ತಕ ವಿತರಿಸಲಾಯಿತು.

ದಲಿತ ಮುಖಂಡರು ಕ್ರಾಂತಿಗೀತೆ ಹಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.