ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಸಮ ಸಮಾಜದ ಕನಸುಗಾರ: ಎಚ್.ಎಂ. ರೇವಣ್ಣ

Published 8 ಡಿಸೆಂಬರ್ 2023, 5:44 IST
Last Updated 8 ಡಿಸೆಂಬರ್ 2023, 5:44 IST
ಅಕ್ಷರ ಗಾತ್ರ

ಕುದೂರು: ನೊಂದವರ ಪರ ಹೋರಾಟ ನಡೆಸಿದ ಅಂಬೇಡ್ಕರ್‌ ಸಮ ಸಮಾಜದ ಕನಸುಗಾರ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಎಸ್.ಸಿ, ಎಸ್.ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಶಿವಶಂಕರ್ ಮಾತನಾಡಿ, ಅಂಬೇಡ್ಕರ್ ಅಸಮಾನತೆ ವಿರುದ್ಧ ಹೋರಾಟ ಮಾಡಿ ನೊಂದವರಿಗೆ ನ್ಯಾಯ ನೀಡಿದರು ಎಂದರು.

ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿ ನಾಮನಿರ್ದೇಶಿತ ಸದಸ್ಯ ತೊರೆರಾಮನಹಳ್ಳಿ ನರಸಿಂಹಮೂರ್ತಿ ಮಾತನಾಡಿ, ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಕರ್ತವ್ಯ ಪಾಲಿಸಲು ಎಲ್ಲರೂ ದೃಢ ಸಂಕಲ್ಪ ಮಾಡಬೇಕು ಎಂದರು.

ಪಾಲನಹಳ್ಳಿ ಮಠಾಧ್ಯಕ್ಷ ಸಿದ್ದರಾಜು ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಎನ್.ಅಶೋಕ್, ಮಾಜಿ ಹಾಪ್ ಕಾಮ್ಸ್ ನಿರ್ದೇಶಕ ಮಂಜೇಶ್ ಕುಮಾರ್, ಸಾಹಿತಿ ತೋಟದಮನೆ ಗಿರೀಶ್, ವನಜಾ, ಜುಟ್ಟನಹಳ್ಳಿ ರಾಮಣ್ಣ, ದೊಡ್ಡಿ ಲಕ್ಷ್ಮಣ್, ತಟವಾಳ್ ಪ್ರಕಾಶ್, ಸಿ.ಜಯರಾಂ ಇದ್ದರು.

ಕುದೂರು ಪಟ್ಟಣದಲ್ಲಿ ಮಂಗಳವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಪಾಲನಹಳ್ಳಿ ಮಠಾಧ್ಯಕ್ಷ ಶ್ರೀ ಸಿದ್ದರಾಜು ಮಹಾಸ್ವಾಮೀಜಿ ಮಾತನಾಡಿದರು.
ಕುದೂರು ಪಟ್ಟಣದಲ್ಲಿ ಮಂಗಳವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಪಾಲನಹಳ್ಳಿ ಮಠಾಧ್ಯಕ್ಷ ಶ್ರೀ ಸಿದ್ದರಾಜು ಮಹಾಸ್ವಾಮೀಜಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT