ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published : 2 ಆಗಸ್ಟ್ 2024, 13:25 IST
Last Updated : 2 ಆಗಸ್ಟ್ 2024, 13:25 IST
ಫಾಲೋ ಮಾಡಿ
Comments

ರಾಮನಗರ: ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ‘ಕೃಷಿ ಪ್ರಶಸ್ತಿ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅದರಂತೆ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಮನಗರ ಜಿಲ್ಲೆಯಲ್ಲಿ ರಾಗಿ (ಮಳೆಯಾಶ್ರಿತ) ಬೆಳೆಯನ್ನು ಕೃಷಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಳೆ ಸ್ಪರ್ಧೆಗೆ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಆನ್‌ಲೈನ್ ತಂತ್ರಾಂಶದಲ್ಲಿ ಆಗಸ್ಟ್ 31ರೊಳಗೆ ಅರ್ಜಿ ನೋಂದಾಯಿಸಬಹುದು. ನೋಂದಣಿಗೆ ಯಾವುದೇ ಶುಲ್ಕವಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ರೈತರ ಛಾಯಾಚಿತ್ರ, ಆಧಾರ್ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಾಗಿದ್ದಲ್ಲಿ ಜಾತಿ ಪ್ರಮಾಣಪತ್ರ ದಾಖಲೆಗಳನ್ನು ಆನ್‌ಲೈನ್ ತಂತ್ರಾಂಶದಲ್ಲಿ ದಾಖಲಿಸಬೇಕು.

ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT