ಬುಧವಾರ, ಆಗಸ್ಟ್ 10, 2022
23 °C

ಬೆಲ್ಲದ್ ದೆಹಲಿ ಭೇಟಿ ನನಗೆ ಗೊತ್ತಿಲ್ಲ: ಸಚಿವ ಸಿ.ಪಿ. ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ‘ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ವಿಚಾರ ನನಗೆ ಗೊತ್ತಿಲ್ಲ’ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದರು.

ಚನ್ನಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅದು ನನಗೆ ಗೊತ್ತಿಲ್ಲ. ನಾನು ರಾಜಕೀಯ ಮಾತನಾಡುವುದಿಲ್ಲ. ಸುಖಾಸುಮ್ಮನೆ ವಿವಾದವಾಗುತ್ತದೆ’ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಯೋಗೇಶ್ವರ್, ‘ಈಗ ಯಾರು ಬೇಡ ಎಂದಿದ್ದಾರೆ. ಈ ವಿಚಾರವಾಗಿಯೂ ನಾನು ಮಾತನಾಡುವುದಿಲ್ಲ’ ಎಂದರು.

ರಾಜ್ಯಕ್ಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ‘ಅರುಣ್ ಸಿಂಗ್ ನಮ್ಮ ನಾಯಕರು. ಶಾಸಕರನ್ನು ಭೇಟಿಯಾಗಲು ಬರುತ್ತಿದ್ದಾರೆ. ನಾನು ಸಹ ಅವರನ್ನು ಭೇಟಿ ಮಾಡುತ್ತೇನೆ. ಸರ್ಕಾರ ಕೊಂಚ ವೇಗವಾಗಿ ನಡೆಯಲು ಬಯಸಿದ್ದೇನೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು