ಸೋಮವಾರ, ಅಕ್ಟೋಬರ್ 26, 2020
24 °C

ರಾಮನಗರ: ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ನಗರದ 1ನೇ ವಾರ್ಡಿನ ಸಿಂಗ್ರಬೋವಿ ದೊಡ್ಡಿಯಲ್ಲಿ ಭಾನುವಾರ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ 'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ. ಪ್ರತಿ ಮನೆ ಮನೆಗೆ ಪಕ್ಷದ ಕಾರ್ಯಕರ್ತರು ತಲುಪಿ ಪ್ರತಿಯೊಬ್ಬರ ದೇಹದ ಉಷ್ಣಾಂಶ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ಹೇಳಿದರು.

ಆರೋಗ್ಯ ತಪಾಸಣೆ ವೇಳೆ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್‌ ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ತಪಾಸಣೆಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡು ಬಂದಲ್ಲಿ ನೇರವಾಗಿ ವೈದ್ಯರಿಗೆ ಮಾಹಿತಿ ಕೊಡಲಾಗುತ್ತಿದೆ. ಈ ಕಾರ್ಯಕ್ಕಾಗಿಯೇ ಪಕ್ಷದ ವತಿಯಿಂದ ಮೂವರು ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಗ್ಯ ತಪಾಸಣೆ ಸಂದರ್ಭ ಕೆಲವರಲ್ಲಿ ದೇಶಹದ ಉಷ್ಣಾಂಶ 100 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ಮಾಹಿತಿಯನ್ನು ವೈದ್ಯರಿಗೆ ನೀಡಿದ್ದೇವೆ. ಅತೀ ಹೆಚ್ಚು ಬಳಲಿಕೆ ಕಂಡು ಬಂದಲ್ಲಿ, ಅಂತಹವರ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಅಥವಾ ತಾಲೂಕು ಆರೋಗ್ಯಾಧಿಕಾರಿಗೆ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದರು.

ಒಂದನೇ ವಾರ್ಡಿನ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.