ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಸೋಂಕು ತಡೆಗೆ ಜಾಗೃತಿ ಜಾಥಾ

Last Updated 18 ಏಪ್ರಿಲ್ 2021, 3:48 IST
ಅಕ್ಷರ ಗಾತ್ರ

ಕನಕಪುರ: ಕೊರೊನಾ ಸೋಂಕು ಬರದಂತೆ ತಡೆಗಟ್ಟುವುದು ನಮ್ಮ ಕೈಯಲ್ಲಿದೆ. ನಾವು ಎಚ್ಚರಿಕೆಯಿಂದ ಇದ್ದು ಕೊರೊನಾ ನಿಯಮಗಳನ್ನು ಪಾಲಿಸಿದರೆ ಸಂಪೂರ್ಣವಾಗಿ ನಿಯಂತ್ರಿಸಬಹುದಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪಿಚ್ಚನಕೆರೆ ಜಗದೀಶ್‌ ಹೇಳಿದರು.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಪಿಚ್ಚನಕೆರೆ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಯಿಂದ ಶನಿವಾರ ನಡೆಸಿದ ಕೊರೊನಾ ಜಾಗೃತಿ ಜಾಥಾ ಉದ್ಘಾಟಿಸಿ ಅವರುಮಾತನಾಡಿದರು.

ಸಭೆ, ಸಮಾರಂಭ, ಕಾರ್ಯಕ್ರಮಗಳಿಗಿಂತ ಬದುಕು ಮತ್ತು ಆರೋಗ್ಯ ಮುಖ್ಯ. ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶಗಳಲ್ಲೂ ಹರಡುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವುದು, ಕೊರೊನಾ ನಿಯಮ ಪಾಲನೆ ಮಾಡುವುದೊಂದೇ ಪರಿಹಾರ ಎಂದರು.

ಮಾಸ್ಕ್‌ ಹಾಕದಿದ್ದರೆ ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯದಿಂದ ಮಾಸ್ಕ್‌ ಹಾಕಬೇಡಿ. ಸೋಂಕು ಹರಡದಂತೆ ತಡೆಗಟ್ಟಲು ನಿಮ್ಮ ಆರೋಗ್ಯಕ್ಕಾಗಿ ಮಾಸ್ಕ್‌ ಧರಿಸಬೇಕು. ಧರಿಸುವ ಮಾಸ್ಕ್ ಅ‌ನ್ನು ಸ್ವಚ್ಛಗೊಳಿಸಿ ಬಳಸಬೇಕು, ಇಲ್ಲವೇ ಮಾಸ್ಕ್‌ ಬದಲಾಯಿಸಬೇಕು. ಒಂದೆಡೆ ಜನರು ಸೇರುವಾಗ ಸಾಮಾಜಿಕ ಅಂತರ ಕಾಪಾಡಿಕೊಂಡು ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದುತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಮಾತನಾಡಿ, ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕಡ್ಡಾಯವಾಗಿ ಅದನ್ನು ಪಾಲಿಸಬೇಕು ಎಂದರು.

ಗ್ರಾಮ ಪಂಚಾಯಿತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಬಾಗಿಲಿಗೆ ಬಂದು ಮಾಹಿತಿ ನೀಡುತ್ತಾರೆ. ಸಲಹೆ, ಸೂಚನೆಗಳನ್ನು ನೀಡುತ್ತಿದ್ದು, ಅದನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಪಂಚಾಯಿತಿ ಕಾರ್ಯದರ್ಶಿ ರಾಮಾಂಜನೇಯ, ಆಶಾ ಮತ್ತು ಅಂತನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಪಂಚಾಯಿತಿ ಸಿಬ್ಬಂದಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT