ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ ಶಾಸಕ ಬಾಲಕೃಷ್ಣಗೆ ಸಿಗದ ಮಂತ್ರಿಗಿರಿ

Published 28 ಮೇ 2023, 5:05 IST
Last Updated 28 ಮೇ 2023, 5:05 IST
ಅಕ್ಷರ ಗಾತ್ರ

ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟವನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಿದ್ದು, ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರಿಗೆ ಅವಕಾಶ ದೊರೆತಿಲ್ಲ.

ಐದನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿರುವ ಬಾಲಕೃಷ್ಣಗೆ ಹಿರಿತನ ಮತ್ತು ಒಕ್ಕಲಿಗ ಕೋಟಾ ಅಡಿ ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ, ಅವರ ನಿರೀಕ್ಷೆ ಹುಸಿಯಾಗಿದೆ. ಸದ್ಯ ಡಿ.ಕೆ. ಶಿವಕುಮಾರ್‌ ಅವರೇ ಜಿಲ್ಲೆಯ ಉಸ್ತುವಾರಿಯನ್ನೂ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಜಿಲ್ಲೆಯವರೇ ಆದ ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಹೀಗಿದ್ದೂ ಜಿಲ್ಲೆಯಿಂದ ಇನ್ನೊಬ್ಬರಿಗೆ ಅವಕಾಶ ಸಿಗಬಹುದು ಎನ್ನುವ ಆಶಯದೊಂದಿಗೆ ಎಚ್.ಸಿ. ಬಾಲಕೃಷ್ಣ ದೆಹಲಿಗೆ ತೆರಳಿದ್ದರು. ಡಿಕೆಶಿ ಬೆನ್ನಿಗೆ ನಿಂತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT