ಬಿಡದಿ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ವಾಪಸ್ ಪಡೆಯಬೇಕು ಹಾಗೂ ಭೂ ಸ್ವಾಧೀನ ರದ್ದು ಪಡಿಸುವಂತೆ ಒತ್ತಾಯಿಸಿ ರೈತರು ಜಾನುವಾರುಗಳೊಂದಿಗೆ ಬೈರಮಂಗಲ ಮತ್ತು ಹೊಸೂರು ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಬಿಡದಿ ಹೋಬಳಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಂದ ಜಾನುವಾರು, ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್ ಸಮೇತ ಬಂದಿದ್ದ ನೂರಾರು ರೈತರು ಬೈರಮಂಗಲ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಬೈರಮಂಗಲ ವೃತ್ತದ ಮಧ್ಯದಲ್ಲಿ ಶಾಮಿಯಾನ ಹಾಕಿದ ರೈತರು ಹಾಗೂ ಅನಿರ್ದಿಷ್ಟಾವಧಿ ಧರಣಿ ಅರಂಭಿಸಿದರು. ಇದರಿಂದಾಗಿ ಬಿಡದಿ- ಹಾರೋಹಳ್ಳಿ ಮಧ್ಯೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಿಕೊಟ್ಟರು.

ಈ ಭಾಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ 300 ಎಕರೆ ಜಮೀನು ಇದೆ. ಅದನ್ನು ಮಾರಾಟ ಮಾಡಿದರೆ ಕೋಟ್ಯಂತರ ರೂಪಾಯಿ ಬರುತ್ತದೆ. ಈ ಕಾರಣಕ್ಕಾಗಿ ಟೌನ್ಶಿಪ್ ಯೋಜನೆ ಜಾರಿಗೊಳಿಸಲು ಅವರು ಹಟಕ್ಕೆ ಬಿದ್ದಿದ್ದಾರೆ ಎಂದು ರೈತಸಂಘ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಟೀಕಿಸಿದರು.

ಅನ್ನ ಕೊಡುವ ಭೂಮಿಯನ್ನು ಕಸಿದು ಅಲ್ಲಿ ಕಟ್ಟಡ ಕಟ್ಟಿದರೆ ಏನು ಪ್ರಯೋಜನ? ಒಂದು ವೇಳೆ ಭೂಮಿ ಸ್ವಾಧೀನಪಡಿಸಿಕೊಂಡರೆ ಈ ಸರ್ಕಾರ ರೈತರು ಮತ್ತು ಭೂಮಿತಾಯಿಯ ಶಾಪಕ್ಕೆ ಗುರಿಯಾಗಬೇಕಾಗುತ್ತದೆ. ಇನ್ನು ಮುಂದೆ ರಾಜಕಾರಣಿಗಳು ಹಳ್ಳಿಗಳಿಗೆ ಬಂದರೆ ರೈತರು ಓಡಿಸಬೇಕು ಎಂದರು.

ರಾಜ್ಯ ಸರ್ಕಾರ ತರಾತುರಿಯಲ್ಲಿ ಯೋಜನೆಗೆ ಅನುಮೋದನೆ ನೀಡಿದೆ. ಕೃಷಿ ಭೂಮಿ ಅಡವಿಟ್ಟು ಹಣ ಲಪಟಾಯಿಸುವುದು ಸರ್ಕಾರದ ಉದ್ದೇಶ. ರೈತರು ಆತ್ಮಸ್ಥೈರ್ಯ ಮತ್ತು ಒಗ್ಗಟ್ಟು ಕಾಪಾಡಿಕೊಂಡರೆ ಒಂದಿಂಚೂ ಭೂಮಿ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಸವಾಲು ಹಾಕಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-565610977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.