ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿಗೆ ಬಾಳೆತೋಟ ನಾಶ

Last Updated 22 ಜನವರಿ 2023, 4:39 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಅಕ್ಕೂರು ಹೊಸಹಳ್ಳಿಯ ಬಾಳೆ ತೋಟವೊಂದಕ್ಕೆ ಶುಕ್ರವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು, ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ.

ಇದರಿಂದ ಫಸಲಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆಯ ಬೆಳೆ ಆನೆ ದಾಳಿಗೆ ತುತ್ತಾಗಿದ್ದು, ರೈತನಿಗೆ ಭಾರಿ ನಷ್ಟವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಗಳ ದಾಳಿಯಿಂದ ನಷ್ಟ ಅನುಭವಿಸಿರುವ ರೈತ ಅಂಗಡಿ ರಾಜು ಅವರಿಗೆ ಸರ್ಕಾರ ಪರಿಹಾರ ಕೊಡಬೇಕು ಎಂದು ರೈತರು ಮನವಿ ಮಾಡಿದರು.

ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಈ ಭಾಗದಲ್ಲಿ ರೈತರ ಬೆಳೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದು, ರೈತರಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದೆ. ಆನೆ ಹಾವಳಿ ತಡೆಗೆ ಹಲವು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT