ಶನಿವಾರ, ಜೂನ್ 19, 2021
21 °C

ಬಿಡದಿ: ಸೋಂಕು ತಡೆಗೆ ಬಂದೋಬಸ್ತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣ ಲಾಕ್‌ಡೌನ್‌ ಪರಿಣಾಮ ನಿಶ್ಯಬ್ದಗೊಂಡಿದೆ.

ಎಲ್ಲಾ ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿದ್ದಾರೆ. ಜನಸಾಮಾನ್ಯರು ಮನೆಯಿಂದ ಹೊರಗಡೆ ಸುಳಿಯುತ್ತಿಲ್ಲ. ಬೆಳಿಗ್ಗೆ 6ಗಂಟೆಯಿಂದ 10ಗಂಟೆವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಜನರು ಮನೆಯಿಂದ ಹೊರಬಂದು ತರಕಾರಿ ಸೇರಿದಂತೆ ಆಹಾರ ಪದಾರ್ಥ ಖರೀದಿಸುತ್ತಿದ್ದಾರೆ.

ಸರ್ಕಾರದ ಆದೇಶ ಪಾಲಿಸುತ್ತಾ ಜನರು ಮನೆಯಲ್ಲೇ ಇರಬೇಕಿದೆ. ಪಟ್ಟಣದ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಪೊಲೀಸರು ಬ್ಯಾರಿಗೇಡ್ ಅಳವಡಿಸಿದ್ದಾರೆ. ಅನಾವಶ್ಯಕವಾಗಿ ಹೊರಗೆ ಬಾರದಂತೆ ನಾಗರಿಕರಿಗೆ ತಿಳಿವಳಿಕೆ ನೀಡುತ್ತಿದ್ದರು. ಮಾಸ್ಕ್ ಇಲ್ಲದೇ ಸಂಚರಿಸುವವರಿಗೆ ದಂಡ ವಿಧಿಸಿದರು. ಜೊತೆಗೆ, ಅನಗತ್ಯವಾಗಿ ಸಂಚರಿಸುವ ವಾಹನಗಳ ಸವಾರರಿಗೂ ದಂಡ ವಿಧಿಸಿ ಎಚ್ಚರಿಕೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು