ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ರಾಮನಗರ: ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ 216 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಒಟ್ಟು 72 ಸಾಕ್ಷ್ಯಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನಾಗಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ಮತ್ತೊಬ್ಬ ಆರೋಪಿ ಸುರೇಶ್ ತಲೆಮರಿಸಿಕೊಂಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಬಸವಲಿಂಗ ಸ್ವಾಮೀಜಿ ವಿರುದ್ಧ ಸಂಚು ರೂಪಿಸಿ ಅವರ ಆತ್ಮಹತ್ಯೆಗೆ ಕಾರಣರಾದ ಆರೋಪ ಹೊರಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.