ಶನಿವಾರ, ಸೆಪ್ಟೆಂಬರ್ 25, 2021
29 °C

ಕನಕಪುರ: ಪದವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಬೂದುಗುಪ್ಪೆ ಗ್ರಾಮದ ಬಳಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ನೂತನವಾಗಿ ವಿಜ್ಞಾನ ವಿಭಾಗ(ಬಿಎಸ್‌ಸಿ) ಪ್ರಾರಂಭಿಸಲಾಗುತ್ತಿದೆ ಎಂದು ಪ್ರಾಂಶುಪಾಲ ಪ್ರೊ.ವೃಷಭೇಂದ್ರಮೂರ್ತಿ ತಿಳಿಸಿದ್ದಾರೆ.

ಕಾಲೇಜಿನಲ್ಲಿ ಈಗಾಗಲೇ ಇರುವ ಬಿ.ಎ, ಬಿ.ಕಾಂ, ಬಿ.ಬಿ.ಎ ಕೋರ್ಸ್‌ಗಳ ಜತೆಗೆ ವಿಶ್ವವಿದ್ಯಾಲಯವು 2021-22ನೇ ಸಾಲಿಗೆ ವಿಜ್ಞಾನ ವಿಭಾಗ ಪ್ರಾರಂಭಿಸಲು ಅನುಮತಿ ನೀಡಿದೆ.

ಕಾಲೇಜಿನಲ್ಲಿರುವ ಹಳೆಯ ಕೋರ್ಸ್‌ಗಳ ಜತೆಗೆ ವಿಜ್ಞಾನ ವಿಭಾಗಕ್ಕೂ ದಾಖಲಾತಿ ಪ್ರಾರಂಭಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಗ್ರಾಮೀಣ, ಪಟ್ಟಣದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು