ರಾಮನಗರ: ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ವಿರುದ್ಧ ದಿಕ್ಕಿನಲ್ಲಿ ಬಸ್ ಚಲಾಯಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಘಟನೆ ಕುರಿತು ಬಿಡದಿ ಠಾಣೆ ಪೊಲೀಸರು ಚಾಲಕನ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಡದಿ ಸಮೀಪದ ಶೇಷಗಿರಿ ಟೋಲ್ ಪ್ಲಾಜಾದಿಂದ ಹನುಮಂತನಗರದ ಆಂಜನೇಯ ದೇವಸ್ಥಾನ ಮುಂಭಾಗದ ರಸ್ತೆಯಲ್ಲಿ ಜುಲೈ 14ರಂದು ಘಟನೆ ನಡೆದಿದೆ.

ಕೆಎ–10, ಎಫ್– 0492 ನಂಬರ್‌ನ ಬಸ್ ಬೆಳಿಗ್ಗೆ 10.41ರ ಸುಮಾರಿಗೆ ಎಕ್ಸ್‌ಪ್ರೆಸ್ ವೇಯಲ್ಲಿ ವಿರುದ್ಧ ದಿಕ್ಕಿನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಾ, ಬೆಂಗಳೂರು ಕಡೆಗೆ ಹೋಗುತ್ತಿದ್ದ ವಾಹನಗಳ ಸವಾರರಲ್ಲಿ ಆತಂಕ ಹುಟ್ಟಿಸಿತ್ತು. ಈ ದೃಶ್ಯವನ್ನು ಸೆರೆಹಿಡಿದಿದ್ದ ಅಭಿಷೇಕ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.

ಟ್ವಿಟರ್ ಪೋಸ್ಟ್ ಗಮನಿಸಿದಾಗ, ಬಸ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಕಂಡು ಬಂದಿತ್ತು. ಪೋಸ್ಟ್ ಆಧರಿಸಿ, ಬಸ್‌ನ ನಂಬರ್ ನಮೂದಿಸಿಕೊಂಡು ಚಾಲಕನ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.