ಬಿಡದಿ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ರಾಜ್ಯ ಸರ್ಕಾರ ನೀಡಿರುವ ಅನುಮೋದನೆ ವಾಪಸ್ ಪಡೆಯಬೇಕು ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಮೇ 10ರಿಂದ ಭೈರಮಂಗಲದಲ್ಲಿ ರೈತರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ್ ಹೇಳಿದರು.

ಉಪನಗರ ಯೋಜನೆಯಿಂದಾಗಿ ರೈತರ ಬದುಕು ಬೀದಿಗೆ ಬರಲಿದೆ. ಇದು ರೈತರ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ, ಹಲವು ಗ್ರಾಮಗಳ ರೈತರು ತಮ್ಮ ದನಕರುಗಳು, ಎತ್ತಿನಗಾಡಿಗಳು ಹಾಗೂ ಟ್ರಾಕ್ಟರ್ಗಳ ಸಮೇತ ಕೃಷಿ ಸಲಕರಣೆಗಳನ್ನು ಹಿಡಿದು ಬೀದಿಗಿಳಿಯಲಿದ್ದಾರೆ ಎಂದು ಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಪನಗರದ ಯೋಜನೆ ವಿರುದ್ಧದ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಕ್ಕಿದೆ. ಆಲ್ ಇಂಡಿಯಾ ಕಿಸಾನ್ ಸಭಾದ ರಾಷ್ಟ್ರೀಯ ಸಹ ಕಾರ್ಯದರ್ಶಿ ಡಿ. ರವೀಂದ್ರನ್ ಅವರು ಯೋಜನಾ ಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ಈ ಹೋರಾಟವನ್ನು ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಇದು ರಾಷ್ಟ್ರಮಟ್ಟದ ಪ್ರತಿಭಟನೆಯಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.

ಮುಖಂಡ ಪ್ರಕಾಶ್ ಮಾತನಾಡಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಪಂಚಾಯಿತಿ ವ್ಯಾಪ್ತಿಯ 25 ಗ್ರಾಮಗಳ 9,640 ಎಕರೆ ಪ್ರದೇಶವು ಸಮೃದ್ಧವಾಗಿದೆ. ಇಲ್ಲಿ ತೆಂಗು, ಅಡಿಕೆ, ರೇಷ್ಮೆ ಬಾಳೆ ಹೈನುಗಾರಿಕೆ ಹಾಗೂ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಇಂತಹ ಹಸಿರು ವಲಯವನ್ನು ನಾಶ ಮಾಡಲು ಸರ್ಕಾರ ಹೊರಟಿರುವುದು ಸರಿಯಲ್ಲ ಎಂದರು.

ಮುಖಂಡರಾದ ಮಂಡಲಹಳ್ಳಿ ನಾಗರಾಜು, ಅಶ್ವಥ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-913524449

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.