ಮುಖ್ಯಮಂತ್ರಿ ವಿಚಾರಕ್ಕೆ ಶೀಘ್ರ ಪರಿಹಾರ
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಶೀಘ್ರವೇ ಪರಿಹಾರ ಸೂಚಿಸಲಿದೆ ಎಂದು ಬಾಲಕೃಷ್ಣ ತಿಳಿಸಿದರು.ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅನಗತ್ಯವಾಗಿ ಮಾತನಾಡಿ ಗೊಂದಲ ಸೃಷ್ಟಿಸುವವರ ವಿರುದ್ಧವೂ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಡಿನ್ನರ್ ಪಾರ್ಟಿ ಹೆಸರಿನಲ್ಲಿ ಯಾರೂ ರಾಜಕೀಯ ಮಾಡುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಡಿನ್ನರ್ ಪಾರ್ಟಿಗೆ ಕರೆದಿದ್ದರು. ಕಾರಣಾಂತರದಿಂದ ಹೋಗಿಲ್ಲ. ಡಿನ್ನರ್ ಪಾರ್ಟಿ ಯಾರು ಮಾಡಿದರೆ ನಮಗೇನು. ಊಟಕ್ಕೆ ಕರೆದಿದ್ದಾರೆ ಅಷ್ಟೇ ಎಂದರು. ಎಚ್.ಡಿ.ಕುಮಾರಸ್ವಾಮಿ ಮಾಗಡಿಗೆ ಹೇಮಾವತಿ ನೀರು ಬರುವುದಿಲ್ಲ. ಇದೊಂದು ಬೋಗಸ್ ಸ್ಕೀಂ ಎಂದಿದ್ದರು. ಅವರು ಸುಳ್ಳು ರಾಜಕಾರಣ ಬಿಡಬೇಕು. ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಇದ್ದಾಗ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಟೀಕಿಸಿದರು. ಕುಮಾರಸ್ವಾಮಿ ಮಂಡ್ಯದಲ್ಲಿ 100 ಎಕರೆ ಜಾಗ ಕೊಟ್ಟರೆ ಕೈಗಾರಿಕೆ ತರುವುದಾಗಿ ಹೇಳಿದ್ದಾರೆ. ಮನಸ್ಸು ಮಾಡಿದರೆ ಅವರೇ ಸ್ವಂತ ಹಣದಲ್ಲಿ 100ಎಕರೆ ಜಾಗ ಖರೀದಿ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಬಹುದು ಎಂದರು.