ರಾಮನಗರ:‘ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವು ಉತ್ತಮವಾಗಿರುತ್ತದೆ. ಜೊತೆಗೆ, ದೇಹವು ಸದೃಢವಾಗಿರುತ್ತದೆ. ಹಾಗಾಗಿ, ಮಹಿಳೆಯರು– ಪುರುಷರೆನ್ನದೆ ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಸತೀಶ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿದ್ದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಕ್ರೀಡಾಕೂಟದಲ್ಲಿ ಭಾಗವಹಿಸಿರುವವರು ಕ್ರೀಡಾಸ್ಫೂರ್ತಿ ಮೆರೆಯಬೇಕು’ ಎಂದು ಸಲಹೆ ನೀಡಿದರು.

ರಾಮನಗರ ಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಆಕಾಶ್ ಮಾತನಾಡಿ, ‘ಚಿಕ್ಕಂದಿನಿಂದ ಎಲ್ಲರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುತ್ತೇವೆ. ಕ್ರೀಡೆಯು ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಧೃಡವಾಗಿಡುತ್ತದೆ. ಜೊತೆಗೆ, ದೈನಂದಿನ ಒತ್ತಡ ನಿವಾರಣೆಗೂ ಕ್ರೀಡೆ ಸಹಕಾರಿ’ ಎಂದರು.

ಹಿಳಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಥ್ರೋಬಾಲ್, ಟೆನಿಕಾಯ್ಟ್ ಮತ್ತು ಹಗ್ಗಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಗಣ್ಯರು ಪದಕ ಹಾಗೂ ಪ್ರಮಾಣಪತ್ರ ವಿತರಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಚನ್ನಪಟ್ಟಣ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಭಾರತಿ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ರಂಗಸ್ವಾಮಯ್ಯ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ವಿಶ್ವನಾಥ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.