ಸೋಮವಾರ, ಅಕ್ಟೋಬರ್ 18, 2021
27 °C

ರಾಮನಗರ: ಭಾರತ್ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಭಾರತ್ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದವು.

ರಾಮನಗರದ ಐಜೂರು ವೃತ್ತದಲ್ಲಿ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಕೆಲವು‌ ಕಾಲ  ಹೆದ್ದಾರಿ ತಡೆ ನಡೆಸಿದರು‌‌. ಈ ವೇಳೆ ಟೈರ್ ಗೆ ಬೆಂಕಿ ಹಚ್ಚಲು  ನಿರಾಕರಿಸಿದ ಪೊಲೀಸರೊಂದಿಗೆ ಮಾಜಿ ಶಾಸಕ ಕೆ. ರಾಜು, ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಹೇಂದ್ರ ವಾಗ್ವಾದ ನಡೆಸಿದರು.

ಚನ್ನಪಟ್ಟಣದ ಕಾವೇರಿ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಎಂದಿನಂತೆ‌ ಜನಜೀವನ: ಜನಸಾಮಾನ್ಯರ ಮೇಲೆ ಬಂದ್ ಪರಿಣಾಮ ಬೀರಿಲ್ಲ. ಮಾರುಕಟ್ಟೆಗಳು, ವಾಣಿಜ್ಯ ವಹಿವಾಟು, ಸಾರಿಗೆ ಸಂಚಾರ ಸಹಜ ಸ್ಥಿತಿಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು