ಮಂಗಳವಾರ, ಫೆಬ್ರವರಿ 25, 2020
19 °C

ಸೋಲೂರು ದೇವಾಲಯದಲ್ಲಿ ಇಂದು ಭರತ ಹುಣ್ಣಿಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ತಾಲ್ಲೂಕಿನ ಸೋಲೂರು ರೇಣುಕಾ ಯಲ್ಲಮ್ಮ ದೇವಾಲಯ ಟ್ರಸ್ಟಿನ ವತಿಯಿಂದ ಫೆ.9ರಂದು ಬೆಳಿಗ್ಗೆ 10 ಗಂಟೆಗೆ ಭರತ ಹುಣ್ಣಿಮೆ ಅಂಗವಾಗಿ ಜಾತ್ರೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಿ, ಪೂಜಿಸಿದ ನಂತರ ಮಠದ ಆವರಣದಲ್ಲಿ ವಿವಿಧ ಜನಪದ ಕಲಾ ತಂಡಗಳೊಂದಿಗೆ ಉತ್ಸವ ಮೂರ್ತಿಯ ಆಕರ್ಷಕ ಮೆರವಣಿಗೆ ನಡೆಯಲಿದೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಪದಾಧಿಕಾರಿಗಳು ಮತ್ತು ದೇವಾಲಯ ಟ್ರಸ್ಸಿನ ಪದಾಧಿಕಾರಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸುವರು. ಸಾಮೂಹಿಕ ಅನ್ನದಾನ ನಡೆಯಲಿದೆ. ಪ್ರಧಾನ ಅರ್ಚಕ ಎಲ್‌.ಗೋಪಿ ತಂಡದವರು ವಿಶೇಷ ಪೂಜಾದಿಗಳನ್ನು ನೆರವೇರಿಸಲಿದ್ದಾರೆ ಎಂದು ಕುದೂರು ಈಡಿಗ ಸಂಘದ ಮುಖಂಡ ವೆಂಕಟೇಶ್‌ ಈಡಿಗ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)