ಭಾನುವಾರ ಬೆಳಿಗ್ಗೆ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಗೃಹೋಪಯೋಗಿ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿದ್ದವು. ಈ ವೇಳೆಯಲ್ಲಿ ಗಾಯಗೊಂಡಿದ್ದ 65 ವರ್ಷದ ನಂಜಮ್ಮ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ನಂಜಮ್ಮ ಸಾವನ್ನಪ್ಪಿದ್ದಾರೆ. ಮೃತರಿಗೆ ಮೂರು ಗಂಡು ಮಕ್ಕಳಿದ್ದಾರೆ. ಸ್ವಗ್ರಾಮದಲ್ಲಿ ಶವ ಸಂಸ್ಕಾರ ಮಾಡಲಾಯಿತು.