ಬಿಡದಿ: ಪುರಸಭೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಗಮನ ಸೆಳೆದಿದೆ. ಮಧ್ಯಾಹ್ನದ ಬಳಿಕ ಕಚೇರಿಯಲ್ಲಿ ಅಧಿಕಾರಿಗಳೇ ಇರುವುದಿಲ್ಲ, ಮೂಮೆಂಟ್ ರಿಜಿಸ್ಟರ್ ನಿರ್ವಹಣೆ ಇಲ್ಲ, ಎಂಜಿನಿಯರ್ ಸದಸ್ಯರ ದೂರು ಸ್ವೀಕರಿಸುತ್ತಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು.

ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ಮಧ್ಯಾಹ್ನ 3 ರಿಂದ 5.30 ರವರೆಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು ಎಂದು ಆದೇಶಿಸಿದರು. ಇಂದಿರಾ ಕ್ಯಾಂಟಿನ್ ಜಾಗಕ್ಕೆ ಮಣ್ಣು ತುಂಬಿಸುವಲ್ಲಿ ಅಕ್ರಮ, ಪಂಪ್ಮೋಟಾರ್ ಅಳವಡಿಸದೆ ಬಿಲ್ ಮಾಡಿಕೊಂಡ ಪ್ರಕರಣಗಳು ಸಭೆಯಲ್ಲಿ ಬಹಿರಂಗವಾದವು.

ವಿಪಕ್ಷ ನಾಯಕರು 'ನಿಮಗೆ ಆಡಳಿತ ಮಾಡಲು ಬಾರದಿದ್ದರೆ ಅವಕಾಶ ಕೊಡಿ' ಎಂದು ಕಾಲೆಳೆದರೆ, ಸದಸ್ಯರು ಸಹಾಯವಾಣಿ ಸಂಖ್ಯೆ ಕಾರ್ಯನಿರ್ವಹಿಸುತ್ತಿಲ್ಲ, ಕಸ ತೆಗೆಯುತ್ತಿಲ್ಲ, ಚಿರತೆ ಹಾವಳಿ ನಿಯಂತ್ರಣಕ್ಕೆ ಸಿಸಿ ಕ್ಯಾಮೆರಾ ಅಳವಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಭಾನುಪ್ರಿಯ ಸಂಪತ್, ಉಪಾಧ್ಯಕ್ಷೆ ಆಯಿಷಾ ಖಲೀಲ್, ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ದೇವರಾಜು, ಬಿಡದಿ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ವಿಜಯ್ ಕುಮಾರ್, ಮುಖ್ಯಾಧಿಕಾರಿ ಎಂ.ಮೀನಾಕ್ಷಿ ಕಂದಾಯ ಅಧಿಕಾರಿ ನಂಜುಂಡಸ್ವಾಮಿ ಸೇರಿದಂತೆ ಸದಸ್ಯರು, ನಾನಾ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ವರ್ಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-14-2058802428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.