ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡದಿ | ವಿವಿಧ ಕಾಮಗಾರಿಗಳ ಉದ್ಘಾಟನೆ

Published 4 ಜುಲೈ 2024, 6:26 IST
Last Updated 4 ಜುಲೈ 2024, 6:26 IST
ಅಕ್ಷರ ಗಾತ್ರ

ಬಿಡದಿ: ಬನ್ನಿಕುಪ್ಪೆಯಲ್ಲಿ ಕಿರು ಆರೋಗ್ಯ ಕೇಂದ್ರ, ಜಡೇನಹಳ್ಳಿಯಲ್ಲಿ ಕಲ್ಯಾಣಿ ಮತ್ತು ಕಾವೇರಿ ನೀರಾವರಿ ನಿಗಮದ ವತಿಯಿಂದ ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ ನಡೆಯಿತು.

ಈ ವೇಳೆ ಶಾಸಕ ಎಸ್‌.ಸಿ.ಬಾಲಕೃಷ್ಣ ಮಾತನಾಡಿ, ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಪ್ರಶಂಸಿದರು.

ಕ್ರಿಯಾಶೀಲ ಸಂಸದರಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಅವರ ಸೇವೆಯನ್ನು ಕಳೆದುಕೊಂಡಿದ್ದೇವೆ. ನೂತನವಾಗಿ ಆಯ್ಕೆಯಾಗಿರುವ ಸಂಸದರು ಕ್ಷೇತ್ರದತ್ತ ಮುಖ ಮಾಡಿ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿರುವ ಸಂಸದ ಎಚ್‌.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಕಡೆಗೆ ಹೆಚ್ಚು ಗಮನ ನೀಡಿ ಜಿಲ್ಲೆಯಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ ಎಂದು ತಿಳಿಸಿದರು.

ಗಾಣಕಲ್ ನಟರಾಜ್, ರೇಣುಕಮ್ಮ, ಜಯಶೀಲಮ್ಮ, ರುದ್ರೇಶ್, ದೀಪಾ ಮುನಿರಾಜು ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT