ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡದಿ: ವಾಹನ ದಟ್ಟಣೆಗೆ ಮುಕ್ತಿ

Published 5 ಜುಲೈ 2024, 4:33 IST
Last Updated 5 ಜುಲೈ 2024, 4:33 IST
ಅಕ್ಷರ ಗಾತ್ರ

ಬಿಡದಿ: ಪಟ್ಟಣದ ಬಿಜಿಎಸ್ ವೃತ್ತ, ನೆಲ್ಲಿಗುಡ್ಡೆ ಕೆರೆ ರಸ್ತೆ ಹಾಗೂ ಬೆಂಗಳೂರು ಮೈಸೂರು ಹೆದ್ದಾರಿ ಸ್ವಚ್ಛತೆ, ಅವೈಜ್ಞಾನಿಕ ವಾಹನಗಳ ನಿಲುಗಡೆ ಮತ್ತು ವಾಹನಗಳ ದಟ್ಟಣೆಯಿಂದ ಮುಕ್ತಿ ಪಡೆದಿದೆ.

ಬಿಜಿಎಸ್ ವೃತ್ತದಲ್ಲಿ ತಳ್ಳುವ ಗಾಡಿ, ಬೀದಿಬದಿ ವ್ಯಾಪಾರಿಗಳು, ವಾಹನಗಳ ಅವೈಜ್ಞಾನಿಕ ನಿಲುಗಡೆ, ಕೆಎಸ್ಆರ್‌ಟಿಸಿ ಬಸ್ ತಂಗುದಾಣದ ಬಳಿ ನಿಲ್ಲಿಸದೆ ಪ್ರಮುಖ ರಸ್ತೆಯಲ್ಲಿ ನಿಲ್ಲಿಸುವುದರಿಂದ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಹಾಗಾಗಿ ಬೀದಿಬದಿ ವ್ಯಾಪಾರಿಗಳ ತೆರವು ಹಾಗೂ ನಿಗದಿತ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ಲುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಬಿಡದಿ ವೃತ್ತ ನಿರೀಕ್ಷಕ ಶಂಕರ್ ನಾಯಕ್ ಮಾತನಾಡಿ, ತೆರವುಗೊಂಡ ಬೀದಿಬದಿ ವ್ಯಾಪಾರಿಗಳು ಹಾಗೂ ತಳ್ಳುವ ಗಾಡಿ ವ್ಯಾಪಾರಿಗಳಿಗೆ ಶೀಘ್ರ ವ್ಯಾಪಾರಕ್ಕೆ ಅನುಕೂಲವಾಗುವಂತೆ ಸ್ಥಳ ನಿಗದಿ ಮಾಡಲಾಗುವುದು. ಜತೆಗೆ ನೆಲ್ಲಿಗುಡ್ಡೆ ಕೆರೆ ರಸ್ತೆ, ಬಿಡದಿ ಮುಖ್ಯ ರಸ್ತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗುವುದು. ಕೆಎಸ್‌ಆರ್‌ಟಿಸಿ ಬಸ್‌ ನಿಗದಿತ ಸ್ಥಳದಲ್ಲಿ ನಿಲುಗಡೆ ಮಾಡದಿದ್ದರೆ ದಮಡ ವಿಧಿಸಲಾಗುವುದು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT