ಬಿಡದಿ: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆ ಅರಳಿ ಮರದ ಬಳಿ ನಿರ್ಮಾಣವಾಗುತ್ತಿರುವ ಶಿವಕುಮಾರ ಸ್ವಾಮೀಜಿ ಮಹಾದ್ವಾರದ ನಿರ್ಮಾಣ ಕಾರ್ಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ‘ಬಿಡದಿ ಭಕ್ತರ ಬಹುವರ್ಷಗಳ ಆಸೆ ಈಡೇರಿದೆ. ಇದೊಂದು ಸಂತೋಷದ ಕಾರ್ಯಕ್ರಮ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಮಹಾದ್ವಾರದ ಸಮೀಪದಲ್ಲಿ ಶಿವಕುಮಾರ ಸ್ವಾಮೀಜಿ ಮಹಾದ್ವಾರವನ್ನು ಭಕ್ತರು ನಿರ್ಮಿಸುತ್ತಿರುವುದು ಸಂತಸದ ವಿಚಾರ’ ಎಂದು ತಿಳಿಸಿದರು.

ಬಿಡದಿ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಜೆ.ಲೋಹೀತ್ ಕುಮಾರ್ ಮಾತನಾಡಿ, ಮುಂದಿನ ಆರು ತಿಂಗಳಲ್ಲಿ ಮಹಾದ್ವಾರ ನಿರ್ಮಿಸಿ ಉದ್ಘಾಟಿಸಲಾಗುವುದು. ಅಂದಾಜು ₹30ಲಕ್ಷ ವೆಚ್ಚದಲ್ಲಿ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಪುರಸಭೆ ನಿಧಿಯಲ್ಲಿ ಈಗಾಗಲೇ ₹20ಲಕ್ಷ ಮೀಸಲಿಡಲಾಗಿದೆ’ ಎಂದು ತಿಳಿಸಿದರು.

ಬೆಳ್ಳಿ ರಥದಲ್ಲಿ ಶ್ರೀಗಳ ಭಾವಚಿತ್ರವನ್ನಿಟ್ಟು ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾ ತಂಡಗಳು ಹಾಗೂ ವೀರಗಾಸೆ ವೇಷದೊಂದಿಗೆ ಮೆರವಣಿಗೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನಕಪುರದ ಮರಳೆಗವಿ ಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಬಿಡದಿ ಚೌಕಿ ಮಠದ ಹುಚ್ಚಪ್ಪ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಪುರಸಭೆ ಮಾಜಿ ಅಧ್ಯಕ್ಷ ಹರಿಪ್ರಸಾದ್, ಸದಸ್ಯರಾದ ಸೋಮಶೇಖರ್, ರಾಕೇಶ್, ಮುಖಂಡರಾದ ಬಿಡದಿಯ ಶಿವದರ್ಶನ ಹೋಟೆಲ್ ಮಾಲೀಕ ಶಶಿಕುಮಾರ್, ಪೊಲೀಸ್ ರಾಮಣ್ಣ, ಕೆಂಚನಕುಪ್ಪೆ ರಮೇಶ್ ಕುಮಾರ್, ಬಿಡದಿ ಪಟ್ಟಣದ ಸಮುದಾಯದ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಊರುಗಳ ಭಕ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-14-545148545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.