ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸರ್ಕಾರ ನೀಡಿರುವ ಅನುಮೋದನೆಯನ್ನು ವಾಪಸ್ ಪಡೆದು, ಭೂ ಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ‘ಸಂಯುಕ್ತ ಹೋರಾಟ– ಕರ್ನಾಟಕ’ ಸಮಿತಿ ಆಗ್ರಹಿಸಿದೆ.

‘ಫಲವತ್ತಾದ, ಸಮೃದ್ಧ ನೀರಾವರಿ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್ಶಿಪ್ ಯೋಜನೆ, ರೈತ ವಿರೋಧಿ ಹಾಗೂ ಪರಿಸರ ವ್ಯವಸ್ಥೆಗೆ ವಿನಾಶಕಾರಿಯಾಗಿದೆ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಅನುಮೋದನೆಯನ್ನು ಸರ್ಕಾರ ವಾಪಸ್ ಪಡೆಯಬೇಕು’ ಎಂದು ಸಮಿತಿಯ ಸದಸ್ಯ ಬಡಗಲಪುರ ನಾಗೇಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದರು.

‘ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿ ವರ್ಷಪೂರ್ತಿ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳು, ರೇಷ್ಮೆ, ಜೋಳ, ರಾಗಿ, ವಿವಿಧ ರೀತಿಯ ಹಣ್ಣು, ತರಕಾರಿಗಳನ್ನು ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ. ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಂತಹ ಸುಸ್ಥಿರ ಬದುಕಿನ ಮೇಲೆ ಪರಿಣಾಮ ಬೀರುವ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ’ ಎಂದರು.

‘ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ರೈತರು ತಮ್ಮ ಬಲವಾದ ವಿರೋಧವನ್ನು ದಾಖಲಿಸಿದ್ದರೂ, 428 ದಿನದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ರೈತರ ಜೊತೆ ಸಮಾಲೋಚನೆ ನಡೆಸದೆ, ಸಚಿವ ಸಂಪುಟದಲ್ಲಿ ಯೋಜನೆಗೆ ಅನುಮೋದನೆ ನೀಡಿರುವುದು ರೈತರ ಹಕ್ಕುಗಳ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮವಾಗಿದೆ’ ಎಂದು ದೂರಿದರು.

‘ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅನುಷ್ಠಾನ ಮಾಡುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಯ ಭೂಸ್ವಾಧೀನದ ಪ್ರಾಥಮಿಕ ಅಧಿಸೂಚನೆಗೆ ರೈತರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಆಲಿಸಿಲ್ಲ. 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿಸಣ್ಣ ರೈತರು ಈ ಭಾಗದಲ್ಲಿದ್ದಾರೆ. ಸ್ವತಃ ರಿಯಲ್ ಎಸ್ಟೇಟ್ ಉದ್ದಿಮೆ ನಡೆಸುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಬಲವಾದ ವಿರೋಧವನ್ನು ಕಡೆಗಣಿಸಿ ಈ ಯೋಜನೆ ಪರವಾಗಿ, ಸರ್ಕಾರ ಹಾಗೂ ಅಧಿಕಾರಿಗಳ ಮೇಲೆ ಪ್ರಭಾವ, ಒತ್ತಡಹಾಕಿ ಆಡಳಿತ ಯಂತ್ರದ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ದೂರಿದರು.

‘ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಹೋರಾಟಕ್ಕೆ ಸಂಯುಕ್ತ ಹೋರಾಟ– ಕರ್ನಾಟಕ ಸಮಿತಿ ಸಂಪೂರ್ಣ ಬೆಂಬಲ ನೀಡಲಿದೆ’ ಎಂದು ಸದಸ್ಯರಾದ ಟಿ. ಯಶವಂತ, ಸಿದ್ದನಗೌಡ ಪಾಟೀಲ, ಪಿ.ಪಿ ಅಪ್ಪಣ್ಣ, ನೂರ್ ಶ್ರೀಧರ್, ಎಚ್.ಪಿ. ಶಿವಪ್ರಕಾಶ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-14-1003069648

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.