ಬಿಡದಿ: ಜೋಗರದೊಡ್ಡಿ ಸಮೀಪದ ಟೊಯೋಟಾ ಕಾರ್ಖಾನೆ ಮುಂದೆ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾರೆ. ಕಂಪನಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ.

ಮೃತ ಬೈಕ್ ಸವಾರನನ್ನು ತಾಲ್ಲೂಕಿನ ಕೂಟಗಲ್ ಹೋಬಳಿ ನಾಗರಕಲ್ಲುದೊಡ್ಡಿ ಯಲ್ಲೇಗೌಡ (44) ಎಂದು ಗುರುತಿಸಲಾಗಿದೆ. ಇವರು ಟೊಯೋಟಾ ಕಂಪನಿಗೆ ಸೇರಿದ ಐಎಲ್ಎಸ್ ಯೂನಿಟ್ನಲ್ಲಿ ಕ್ಯಾಂಟರ್ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ದಿನನಿತ್ಯ ಎರಡನೇ ಶಿಫ್ಟ್ ಕೆಲಸಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕಂಪನಿ ಬಸ್ ಡಿಕ್ಕಿ ಹೊಡೆದಿದೆ.

ಮೃತ ಯಲ್ಲೇಗೌಡ ಅವರಿಗೆ ಕಂಪನಿ ವತಿಯಿಂದ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-14-1374125054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.