ರಾಮನಗರ (ಬಿಡದಿ): ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆಗಾಗಿ ಎರಡು ತಿಂಗಳ ಹಿಂದೆ ಬಂದ್ ಆಗಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇದೀಗ ಸಂಪೂರ್ಣವಾಗಿ ಓಪನ್ ಆಗಿದೆ. ನಿಯಮ ಉಲ್ಲಂಘನೆ ಸರಿಪಡಿಸಿಕೊಂಡ ಹಿನ್ನೆಲೆಯಲ್ಲಿ ಮಂಡಳಿಯು ಪುನರಾರಂಭಕ್ಕೆ ಅನುಮತಿ ನೀಡಿದೆ.

ವಾಯು ನಿಯಂತ್ರಣ ಮಂಡಳಿಯು ಅ. 6 ರಂದು ವೆಲ್ಸ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ (ಜಾಲಿ ವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್) ಗೆ ನೋಟಿಸ್ ನೀಡಿದ್ದು ಈ ಕ್ಷಣದಿಂದಲೇ ನಿಮ್ಮ ಕಾರ್ಯ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ನೋಟಿಸ್ ನೀಡಿತ್ತು.

ಸುಮಾರು 35 ಎಕರೆ ಪ್ರದೇಶದಲ್ಲಿರುವ ವೇಲ್ಸ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಲ್ಲಿ (ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್) ಬಳಕೆ ಮಾಡಿದ ನೀರನ್ನ ಶುದ್ಧೀಕರಿಸಿ ಮರುಬಳಕೆ ಮಾಡುತ್ತಿಲ್ಲ ಹಾಗೂ ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ- 1974 ಮತ್ತು ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ-1981ರಡಿ ಕಾರ್ಯಾಚರಣೆಗೆ ಅನುಮತಿ ಪಡೆದಿಲ್ಲ ಎಂದು ಮಂಡಳಿ ಸ್ಟುಡಿಯೋಗೆ ನೋಟಿಸ್ ನೀಡಿತ್ತು.

ನೋಟಿಸ್ ಗೆ ಸೂಕ್ತ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಅ. 7ರಂದು ರಾಮನಗರ ತಹಶೀಲ್ದಾರ್ ತೇಜಸ್ವಿನಿ ಅವರು ಸ್ಟುಡಿಯೋಗೆ ಬೀಗ ಹಾಕಿದ್ದರು. ಇದರಿಂದಾಗಿ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಷೋ ಸೇರಿದಂತೆ ಎಲ್ಲಾ ರೀತಿಯ ಮನರಂಜನೆ ಮತ್ತು ಅಡ್ವೆಂಚರ್ ಚಟುವಟಿಕೆಗಳು ಸ್ಥಗಿತಗೊಂಡಿದ್ದವು.

ಬಂದ್ ಮಾಡಿಸಿದ ಬಳಿಕ ಸ್ಟುಡಿಯೊದವರು ಮಂಡಳಿಯಿಂದ ಕಾರ್ಯಾಚರಣೆಗೆ ಅಗತ್ಯ ಅನುಮತಿ ಪಡೆದಿದ್ದಾರೆ. ಇತರ ನಿಯಮ ಉಲ್ಲಂಘನೆಗಳನ್ನು ಸರಿಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ, ಸ್ಟುಡಿಯೋಗೆ ಹಾಕಿದ್ದ ಬೀಗವನ್ನು ಇತ್ತೀಚಿಗೆ ತೆರವುಗೊಳಿಸಿ ಕಾರ್ಯಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಾದೇಶಿಕ ಪರಿಸರ ಅಧಿಕಾರಿ ಮಂಜುನಾಥ್ ತಿಳಿಸಿದರು.