ರಾಮನಗರ: ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ಷೋ ನಿರೂಪಕ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ನೀಡಿದ್ದಕ್ಕೆ ಸಂಬಂಧಿಸಿದಂತೆ, ಸ್ಪಷ್ಟೀಕರಣ ನೀಡುವಂತೆ ಕಲರ್ಸ್ ಕನ್ನಡ ವಾಹಿನಿಯ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.

‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಯ ಟಾಸ್ಕ್ನಲ್ಲಿ ಸ್ಪರ್ಧಿಯೊಬ್ಬರು ರಣಹದ್ದು ಚಿತ್ರ ತೋರಿಸಿದಾಗ ಸುದೀಪ್ ಅವರು, ‘ಹೊಂಚು ಹಾಕಿ ಸಂಚು ಮಾಡಿ ಕರೆಕ್ಟ್ ಟೈಮಿಗೆ ಲಬಕ್ ಅಂತ ಹಿಡಿಯುವುದು’ ಎಂದು ಹೇಳಿದ್ದರು. ಇದಕ್ಕೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು.

ರಣಹದ್ದು ಸ್ವಭಾವದ ಕುರಿತು ಸುದೀಪ್ ಅವರು ತಪ್ಪು ಮಾಹಿತಿ ನೀಡಿದ್ದಾರೆ. ರಣಹದ್ದುಗಳು ಸತ್ತ ಜೀವಿಗಳ ಶವ ತಿಂದು ಪರಿಸರ ಸ್ವಚ್ಛಗೊಳಿಸಿ, ಸಾಂಕ್ರಾಮಿಕ ರೋಗ ಹರಡದಂತೆ ಪ್ರಮುಖ ಪಾತ್ರ ವಹಿಸುತ್ತವೆ. ತಪ್ಪು ಮಾಹಿತಿಯಿಂದ ರಣಹದ್ದುಗಳ ಸಂರಕ್ಷಣೆಗೆ ಹಿನ್ನಡೆ ಆಗಲಿದೆ.

ಈ ಬಗ್ಗೆ ಸುದೀಪ್ ಸ್ಪಷ್ಟೀಕರಣ ನೀಡಿ ತಪ್ಪು ಗ್ರಹಿಕೆ ದೂರ ಮಾಡಲು ಷೋ ಆಯೋಜಕರಿಗೆ ಸೂಚನೆ ನೀಡಬೇಕು ಎಂದು ಟ್ರಸ್ಟ್ ಪದಾಧಿಕಾರಿಗಳು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಜ. 12ಕ್ಕೆ ಮನವಿ ಕೊಟ್ಟಿದ್ದರು.

ಇದರ ಬೆನ್ನಲ್ಲೇ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರಾಮಕೃಷ್ಣಪ್ಪ ಅವರು, ಬಿಗ್ ಬಾಸ್ ಷೋ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದಾರೆ. ಪರಿಸರ ಸಮತೋಲನ ಕಾಪಾಡುವ ರಣಹದ್ದುಗಳ ಬಗ್ಗೆ ಮುಂದಿನ ಪೀಳಿಗೆಗೆ ಸರಿಯಾದ ಮಾಹಿತಿ ಒದಗಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾಗಿ, ರಣಹದ್ದು ಸ್ವಭಾವದ ಕುರಿತು ತಮ್ಮ ಮುಂದಿನ ಸಂಚಿಕೆಯಲ್ಲಿ ಸ್ಪಷ್ಟೀಕರಣ ನೀಡಬೇಕು ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.