ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

Published 14 ಮಾರ್ಚ್ 2024, 6:41 IST
Last Updated 14 ಮಾರ್ಚ್ 2024, 6:41 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಕಟ್ಟಮಾನದೊಡ್ಡಿಯಲ್ಲಿ ಬುಧವಾರ ಮೂವರಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಸವಾರ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಕೊಂಕಾಣಿದೊಡ್ಡಿಯ ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರೂ ಸಂಜೆ 6ರ ಸುಮಾರಿಗೆ ಮಂಚನಬೆಲೆ ಕಡೆಯಿಂದ ರಾಮನಗರಕ್ಕೆ ಬರುತ್ತಿದ್ದರು. ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಸವಾರ, ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆ ಪಕ್ಕದ ಮನೆ ಬಳಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾರಾಯಣಸ್ವಾಮಿ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದರು.

ಸ್ಥಳೀಯರ ನೆರವಿನಿಂದ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದರು. ಬೈಕ್‌ನಲ್ಲಿದ್ದ ಮೂವರು ಸ್ನೇಹಿತರಾಗಿದ್ದು, ಮಂಚನಬೆಲೆ ಬಳಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಮೃತರು ಹಾಗೂ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT