ಮಾಗಡಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದರಿಂದ ವಿದ್ಯಾರ್ಥಿ ದರ್ಶನ್ (19) ಎಂಬಾತ ಮೃತಪಟ್ಟಿರುವ ಘಟನೆ ಮಾಗಡಿ–ರಾಮನಗರ ಮುಖ್ಯರಸ್ತೆಯ ಜೋಡಗಟ್ಟೆ ಕ್ರಾಸ್‌ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರ ಶರತ್ ಗಾಯಗೊಂಡಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾರೋಹಳ್ಳಿ ತಾಲ್ಲೂಕಿನ ಬಿಲ್ಲನಕೊಪ್ಪೆ ದರ್ಶನ್ ಮತ್ತು ಹಾರೋಹಳ್ಳಿಯ ಮೇಘಲ ಬೀದಿಯ ಶರತ್ ಇಬ್ಬರೂ ಐಟಿಐ ವಿದ್ಯಾರ್ಥಿಗಳಾಗಿದ್ದು, ಬೆಳಿಗ್ಗೆ ಹೋಂಡಾ ಶೈನ್ ಬೈಕ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಜೋಡಗಟ್ಟೆ ಕ್ರಾಸ್‌ನಲ್ಲಿ ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.