ಮಂಗಳವಾರ, ಅಕ್ಟೋಬರ್ 4, 2022
26 °C

ರಾಮನಗರ: ದಿಢೀರ್ ಕುಸಿದ ಸೇತುವೆ- ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಅರ್ಕಾವತಿ ನದಿ ಪ್ರವಾಹದಿಂದಾಗಿ ತಾಲ್ಲೂಕಿನ ಸುಗ್ಗನಹಳ್ಳಿ–ಮಾಯಗಾನಹಳ್ಳಿ ಸಂಪರ್ಕ ಸೇತುವೆಯು ಮಂಗಳವಾರ ದಿಢೀರ್ ಕುಸಿದಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ  ಬೈಕ್ ಸವಾರನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಮಂಚನಬೆಲೆ ಜಲಾಶಯದಿಂದ  ಅರ್ಕಾವತಿ ನದಿಗೆ 6 ಸಾವಿರ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಬಿಡಲಾಗುತ್ತಿದೆ. ಇದರಿಂದ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ನೀರಿನ ಸೆಳೆತದಿಂದಾಗಿ ಸೇತುವೆಯು ಏಕಾಏಕಿ ಕುಸಿಯಿತು. ಈ ಸಂದರ್ಭ ಸೇತುವೆ ಮೇಲಿದ್ದ ತಿಮ್ಮಸಂದ್ರ ಗ್ರಾಮದ ವ್ಯಕ್ತಿ ಕಂಡಾದಯ್ಯ ಎಂಬಾತ ಬೈಕ್‌ ಸಮೇತ ನೀರಿಗೆ ಬಿದ್ದರು. ಕೂಡಲೇ ಗ್ರಾಮಸ್ಥರು ಧಾವಿಸಿ ಅವರನ್ನು ಹಗ್ಗದ ಮೂಲಕ ರಕ್ಷಣೆ ಮಾಡಿದರು.

ಈ ಸೇತುವೆಯು ಹಲವು ಗ್ರಾಮಗಳಿಗೆ ಸಂಪರ್ಕ ಸೇತುವಾಗಿದ್ದು, ಘಟನೆಯಿಂದಾಗಿ ರಸ್ತೆ ಸಂಪರ್ಕ ಕಡಿತವಾಗಿದೆ. ಇದರಿಂದಾಗಿ ಸಾರ್ವಜನಿಕರು ಪರದಾಡುವಂತೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು