ಸೋಮವಾರ, ಆಗಸ್ಟ್ 2, 2021
28 °C

ರಾಮನಗರ | ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತನ ಜನ್ಮ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ಕೋವಿಡ್ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರೊಬ್ಬರ ಜನ್ಮದಿನವನ್ನು ಆಸ್ಪತ್ರೆಯಲ್ಲೇ ಆಚರಿಸುವ ಮೂಲಕ ಅವರಲ್ಲಿ ಆತ್ಮಸ್ತೈರ್ಯ ತುಂಬುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡಿದೆ.

ಕೋವಿಡ್ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಆರೋಗ್ಯ ಇಲಾಖೆಯ ನರ್ಸ್ ಒಬ್ಬರು ಸೋಂಕು ದೃಢಪಟ್ಟ‌ ಕಾರಣ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಅವರ ಜನ್ಮದಿನ ಇತ್ತು. ಹೀಗಾಗಿ ಡಿಎಚ್ಒ ಹಾಗೂ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯಲ್ಲೇ ಕೇಕ್ ಕತ್ತರಿಸುವ ಮೂಲಕ ಸೋಂಕಿತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. 

ಈ ಸಂಭ್ರಮದ ಕ್ಷಣಗಳನ್ನು ಜಿಲ್ಲಾ ಪಂಚಾಯಿತಿಯು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು