ಕನಕಪುರ: ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಜಗನ್ನಾಥ ಗೌಡ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿ ಸೋಮೆಂದ್ಯಾಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದಾರಹಳ್ಳಿ ಗ್ರಾಮದಲ್ಲಿ ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಘಟಕದ ವತಿಯಿಂದ ಗುರುವಾರ ನಡೆಸಿದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನಕಪುರ ತಾಲ್ಲೂಕು ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮುಖಂಡರಾದ ನಂದೀಶ್, ದರ್ಶನ್, ಸುದರ್ಶನ್, ಅಭಿಷೇಕ್ ಉಪಸ್ಥಿತರಿದ್ದರು.