ಶನಿವಾರ, ಏಪ್ರಿಲ್ 1, 2023
31 °C

ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಿಜೆಪಿ ಜಿಲ್ಲಾ ಘಟಕ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ದಲಿತ ಸಮುದಾಯದವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಚಕ್ಕಲೂರು ಚೌಡಯ್ಯ ಎಚ್ಚರಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಲಿತ ಸಮುದಾಯದವರು ತಮ್ಮ ಹೊಟ್ಟೆಪಾಡಿಗಾಗಿ ಹಾಗೂ ರಾಜಕೀಯ, ಆರ್ಥಿಕ ಉನ್ನತ ಹುದ್ದೆಯ ಆಸೆಗಾಗಿ ಬಿಜೆಪಿಯ ಬಾಗಿಲಿಗೆ ತೆರಳಿದ್ದಾರೆ ಎಂದು ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಅವರ ಅಧಿಕಾರದ ದುರಾಸೆಯನ್ನು ತೋರಿಸುತ್ತದೆ. ಬೆಳೆಸಿದ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಅವರು ದಲಿತ ಸಮುದಾಯದ ಬಗ್ಗೆ ಹೇಳಿಕೆ ನೀಡುವ ಯೋಗ್ಯತೆ ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

ರಾಜಕೀಯದ ಸಿದ್ಧಾಂತ ತಿಳಿಯದ ಸಿದ್ದರಾಮಯ್ಯ ದಲಿತರನ್ನು ಅವಮಾನಿಸಿದ್ದಾರೆ. ಬಿಜೆಪಿ ಆಡಳಿತ ಹಾಗೂ ಸಂಘಟನೆಯನ್ನು ಸಹಿಸಲಾರದ ಅವರು ಕಪಟ ರಾಜಕಾರಣ ಮಾಡಲು ಮುಂದಾಗಿದ್ದಾರೆ. ಈಗ ದಲಿತರನ್ನು ಅವಮಾನಿಸಲು ಮುಂದಾಗುತ್ತಿದ್ದಾರೆ. ಸಿದ್ದರಾಮಯ್ಯ ದಲಿತ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.