ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಸೀರೆ ತುಂಬಿದ್ದ ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ BJP-JDS ಕಾರ್ಯಕರ್ತರು

Published 19 ಮಾರ್ಚ್ 2024, 17:03 IST
Last Updated 19 ಮಾರ್ಚ್ 2024, 17:03 IST
ಅಕ್ಷರ ಗಾತ್ರ

ರಾಮನಗರ: ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮಿನಲ್ಲಿ ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತದಾರರಿಗೆ ಹಂಚುವುದಕ್ಕಾಗಿ ಕಾಂಗ್ರೆಸ್ ನವರು ವಾಹನದಲ್ಲಿ ಸೀರೆಗಳನ್ನು ತಂದು ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಕಾರ್ಯಕರ್ತರು ವಾಹನ ಹಿಡಿದು ಗೋದಾಮು ಸಿಬ್ಬಂದಿ ಮತ್ತು ವಾಹನದ ಚಾಲಕನನ್ನು ತಡೆದು ವಿಚಾರಿಸಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕಾರ್ಯಕರ್ತರು ಜಮಾಯಿಸತೊಡಗಿದರು. ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಡಿವೈಎಸ್ಪಿ ದಿನಕರ ಶೆಟ್ಟಿ, ರಾಮನಗರ ಪುರ ಠಾಣೆ ಪಿಎಸ್ ಐ ಆಕಾಶ್ ಸೇರಿದಂತೆ ಸ್ಥಳೀಯ ಚುನಾವಣಾ ಸಿಬ್ಬಂದಿ ಭೇಟಿ ನೀಡಿದರು. ಸೀರೆಗಳನ್ನು ಪರಿಶೀಲಿಸಿ ಗೋದಾಮು ಸಿಬ್ಬಂದಿಯಿಂದ ಸೀರೆಗಳನ್ನು ತಂದಿರುವುದಕ್ಕೆ ಸಂಬಂಧಿಸಿದ ರಸೀತಿ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT