ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಸಡ್ಡು

ರಾಮನಗರ, ಮಾಗಡಿಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ; ವಿವಿಧ ಯೋಜನೆಗಳಿಗೆ ಚಾಲನೆ
Last Updated 1 ಜನವರಿ 2022, 20:07 IST
ಅಕ್ಷರ ಗಾತ್ರ

ರಾಮನಗರ: ಮುಖ್ಯಮಂತ್ರಿಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ರಾಮನಗರ ಜಿಲ್ಲೆಗೆ ಆಗಮಿಸುತ್ತಿದ್ದು, 3ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿ ದ್ದಾರೆ.

ಇದೇ ತಿಂಗಳ 9ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ಜಿಲ್ಲೆಯ ಮೇಕೆದಾಟು ಪ್ರದೇಶದಿಂದ ಬೆಂಗಳೂರಿಗೆ ಪಾದ ಯಾತ್ರೆ ನಡೆಯಲಿದೆ. ಅದಕ್ಕೂ ಒಂದು ವಾರ ಮುನ್ನವೇ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿ ಆಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ವಿರೋಧ ಪಕ್ಷಗಳಿಗೆ ಟಕ್ಕರ್‌ ನೀಡಲು ಸರ್ಕಾರ ಯೋಜಿಸಿದೆ.

ಯಾವೆಲ್ಲ ಕಾಮಗಾರಿ?: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ₹289.69 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನೆರವೇರಿಸುವರು. ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಒಂದರಲ್ಲಿಯೇ ₹195.41 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರುತ್ತಿದೆ. ಉಳಿದ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ₹94.27 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುತ್ತಿದೆ.

ಮಾಗಡಿಯಲ್ಲಿ ₹ 25 ಕೋಟಿ ವೆಚ್ಚದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಮುಕ್ತ ವಿ.ವಿ. ಅಧ್ಯಯನ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.

ಬಿಡದಿ: ಯುಜಿಡಿ ಯೋಜನೆಗೆ ಚಾಲನೆ

ಅತಿ ವೇಗದಲ್ಲಿ ಬೆಳೆಯುತ್ತಿರುವ ಬಿಡದಿ ಪಟ್ಟಣಕ್ಕೆ ಅತ್ಯವಶ್ಯವಾದ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಸರ್ಕಾರ ಈಚೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿತ್ತು. ಇದೀಗ ಈ ಕಾಮಗಾರಿಗೆ ಚಾಲನೆ ದೊರೆಯಲಿದೆ. ಇದಕ್ಕಾಗಿ ಸರ್ಕಾರ ₹98.20 ಕೋಟಿ ವಿನಿಯೋಗಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT