ದೇಶದ ಸುರಕ್ಷತೆಗಾಗಿ ಬಿಜೆಪಿ ಬೆಂಬಲಿಸಿ: ಸುರೇಶ್ ಕುಮಾರ್

ಸೋಮವಾರ, ಏಪ್ರಿಲ್ 22, 2019
31 °C

ದೇಶದ ಸುರಕ್ಷತೆಗಾಗಿ ಬಿಜೆಪಿ ಬೆಂಬಲಿಸಿ: ಸುರೇಶ್ ಕುಮಾರ್

Published:
Updated:
Prajavani

ಚನ್ನಪಟ್ಟಣ: ದೇಶದ ಸುರಕ್ಷತೆಗಾಗಿ ಹಾಗೂ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ವಕೀಲರಲ್ಲಿ ಮನವಿ ಮಾಡಿದರು.

ಪಟ್ಟಣದ ವಕೀಲರ ಸಂಘದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ಅಶ್ವಥ್ ನಾರಾಯಣ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು. ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಹಾಗೆಯೇ ರಾಜ್ಯದಲ್ಲಿಯೂ ಜನತೆ ಪಕ್ಷದ ಪರ ಇದ್ದಾರೆ. ಎಲ್ಲರೂ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನರಿಗೆ ನಂಬಿಕೆ ಇದೆ. ರಾಜ್ಯದ ಸಮ್ಮಿಶ್ರ ಸರ್ಕಾರದ ಬಗ್ಗೆ ಜನರಲ್ಲಿ ಗೊಂದಲವಿದೆ. ಹಾಗಾಗಿ ರಾಜ್ಯದ ಜನತೆ ಪಕ್ಷ ಬೆಂಬಲಿಸುವ ವಿಶ್ವಾಸವಿದೆ. ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು.

ಸಂವಿಧಾನವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಆದರೆ ಡಾ. ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಮತಗಳನ್ನು ತಮ್ಮತ್ತ ಸೆಳೆಯಲು ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ವದಂತಿ ಇದು ಎಂದರು.

‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ. ನಮ್ಮ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ. ಎಲ್ಲರೂ ಮೋದಿ ಅವರು ಎರಡನೆ ಬಾರಿಗೆ ಪ್ರಧಾನಿಯಾಗಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.

ನ್ಯಾಯಾಲಯದಲ್ಲಿ ಕ್ಯಾಂಟೀನ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿದ್ದು ಪರಿಹರಿಸುವಂತೆ ವಕೀಲರು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅವರು ತಿಳಿಸಿದರು.

ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷ ನಿಂಗಪ್ಪ, ಖಜಾಂಚಿ ಹೇಮಂತ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್. ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಪಕ್ಷದ ಮುಖಂಡರಾದ ಜಯರಾಮು, ರಾಂಪುರ ಮಲವೇಗೌಡ, ಹುಲುವಾಡಿ ದೇವರಾಜು, ನೇರಳೂರು ನಾಗರಾಜು, ಶೆಟ್ಟಿಹಳ್ಳಿ ಶಿವಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !