ಬಿಜೆಪಿ ಕಾರ್ಯಕರ್ತರಿಂದ ಬೈಕ್‌ ರ್‍ಯಾಲಿ

ಶನಿವಾರ, ಏಪ್ರಿಲ್ 20, 2019
28 °C

ಬಿಜೆಪಿ ಕಾರ್ಯಕರ್ತರಿಂದ ಬೈಕ್‌ ರ್‍ಯಾಲಿ

Published:
Updated:
Prajavani

ರಾಮನಗರ: ಬಿಜೆಪಿ ಅಭ್ಯರ್ಥಿ ಅಶ್ವಥ್‌ ನಾರಾಯಣ ಸೋಮವಾರ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೋಡ್‌ ಶೋ ಮೂಲಕ ಮತಯಾಚನೆ ಮಾಡಿದರು. ಇದೇ ಸಂದರ್ಭ ಕಾರ್ಯಕರ್ತರಿಂದ ಬೈಕ್ ರ್‍ಯಾಲಿ ನಡೆಯಿತು.

ಮಾಯಗಾನಹಳ್ಳಿಯಲ್ಲಿ ಬೈಕ್‌ ರ್‍ಯಾಲಿಗೆ ಚಾಲನೆ ದೊರೆಯಿತು. ಅಲ್ಲಿಂದ ಸುಗ್ಗನಹಳ್ಳಿ, ಹರಿಸಂದ್ರ ಮಾರ್ಗವಾಗಿ ಮತಯಾಚನೆ ಮಾಡಿದ ಅಶ್ವಥ್‌ ನಾರಾಯಣ, ‘ಕೇಂದ್ರದಲ್ಲಿ ಕಳೆದ ಐದು ವರ್ಷ ಅಧಿಕಾರ ನಡೆಸಿದ ನರೇಂದ್ರ ಮೋದ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದೆ. ಅನೇಕ ಮಹಾತ್ವಕಾಂಕ್ಷಿ ಯೋಜನೆಗಳನ್ನು ಜನರಿಗೆ ಅರ್ಪಿಸಿದೆ. ಜಿಲ್ಲೆ ಹಾಗೂ ದೇಶದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಬೈಕ್‌ಗಳಿಗೆ ಬಿಜೆಪಿ ಬಾವುಟ ಕಟ್ಟಿಕೊಂಡ ಕಾರ್ಯಕರ್ತರು ನಗರದೆಲ್ಲೆಡೆ ಸಂಚರಿಸುತ್ತಾ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್‌, ಉಪಾಧ್ಯಕ್ಷ ಎಸ್‌.ಆರ್. ನಾಗರಾಜು ಹಾಗೂ ಪದಾಧಿಕಾರಿಗಳು ಜೊತೆಗಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !