ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಪುನೀತ್ ಜನ್ಮದಿನ: ರಕ್ತದಾನ ಶಿಬಿರ

Published 18 ಮಾರ್ಚ್ 2024, 6:21 IST
Last Updated 18 ಮಾರ್ಚ್ 2024, 6:21 IST
ಅಕ್ಷರ ಗಾತ್ರ

ಚನ್ನಪಟ್ಟಣ: ಚಿತ್ರನಟ ದಿವಂಗತ ಪುನೀತ್ ರಾಜ್ ಕುಮಾರ್ ಜನ್ಮದಿನದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಅಪ್ಪು ಅಭಿಮಾನಿಗಳ ಸಂಘದಿಂದ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಜೀವಾಮೃತ ಬ್ಲಡ್ ಬ್ಯಾಂಕ್ ವತಿಯಿಂದ ರಕ್ತ ಸಂಗ್ರಹಿಸಲಾಯಿತು. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹಾಗೂ ಗ್ರಾಮದ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ವೇಳೆ ಸಂಘದ ವತಿಯಿಂದ ಗ್ರಾಮದ ಸರ್ಕಾರಿ ಶಾಲೆಗೆ ಕುರ್ಚಿ, ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ ಮಾಡಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು.

ರಾಜ್ ಕುಟುಂಬದ ಒಡನಾಡಿ ತಗಚಗೆರೆ ನಾಗೇಶ್, ಗ್ರಾಮದ ಯುವ ಮುಖಂಡರಾದ ಸಂತೋಷ್, ಪುನೀತ್, ಪ್ರವೀಣ್, ಜಗದೀಶ್, ನವೀನ್, ಮಧು, ಮಂಜು, ಚಂದ್ರ, ಮನು, ಸ್ವಾಮಿ, ಸುಕೇಶ್, ರಾಕಿ, ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT