ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆದುಳು ಜ್ವರಕ್ಕೆ ಮುನ್ನೆಚ್ಚರಿಕೆ ಅಗತ್ಯ: ಡಾ. ಶಶಿಧರ್

Published 24 ಮೇ 2023, 3:59 IST
Last Updated 24 ಮೇ 2023, 3:59 IST
ಅಕ್ಷರ ಗಾತ್ರ

ರಾಮನಗರ: ‘ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚು. ಇದರಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬೇಕಾದರೆ ಮುನ್ನೆಚ್ಚರಿಕೆ ಅಗತ್ಯ‘ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೆದುಳು ಜ್ವರ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯದಲ್ಲಿ ಮೆದುಳು ಜ್ವರದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶ ಎಂದು ತಿಳಿಸಿದರು.

ವೈದ್ಯಾಧಿಕಾರಿ ಶ್ವೇತಾ ಮಾತನಾಡಿ, ‘ಮೆದುಳು ಜ್ವರದ ರೋಗಾಣುಗಳನ್ನು ಹೊಂದಿದ ಹಂದಿ ಮತ್ತು ಕೊಕ್ಕರೆಯನ್ನು ಕಚ್ಚಿದ ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗವು ಒಬ್ಬರಿಂದ ಮತೊಬ್ಬರಿಗೆ ಹರಡುತ್ತದೆ. ಪ್ರಾರಂಭದಲ್ಲಿ ವಿಪರೀತ ಜ್ವರ, ತಲೆನೋವು, ಕತ್ತಿನ ಬಿಗಿತ, ತಲೆಸುತ್ತುವಿಕೆ, ಮೈನಡುಕ, ಮತ್ತು ಜ್ಞಾನ ತಪ್ಪುವುದು, ಈ ರೋಗದ ಮುಖ್ಯ ಲಕ್ಷಣಗಳು. ಇಂತಹ ಲಕ್ಷಣಗಳು ಕಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು‘ ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡಿ, ‘ಮೆದುಳು ಜ್ವರ ನಿಯಂತ್ರಿಸುವ ಸಲುವಾಗಿ ಈಗಾಗಲೇ 1 ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜೆ.ಇ ಲಸಿಕಾ ಅಭಿಯಾನದಡಿಯಲ್ಲಿ ಲಸಿಕೆಯನ್ನು ನೀಡಲಾಗಿದೆ. ಜೊತೆಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಅರ್ಹ ಮಕ್ಕಳಿಗೆ ಜೆ.ಇ. ಲಸಿಕೆಯನ್ನು ನೀಡಲಾಗುತ್ತಿದ್ದು ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು‘ ಎಂದು ಕೋರಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಪಿ.ಡಿ.ಒ ಶಿವಕುಮಾರ್, ಸದಸ್ಯರಾದ ಶಿಲ್ಪಾ, ಮಹದೇವು, ಬಸವರಾಜು, ತ್ರಿವೇಣಿ, ಮಾಜಿ ಸದಸ್ಯ ವಿಶ್ವನಾಥ್, ಪಶುವೈದ್ಯ ಡಾ. ವೆಂಕಟೇಶ್, ಕೀಟ ಶಾಸ್ತ್ರಜ್ಞೆ ಸೌಮ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿನಯ್ ಕುಮಾರ್, ರಾಜೇಂದ್ರ, ವಿಠಲ್, ದಾಸಪ್ಪ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT