ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಬಿಎಸ್‌ಪಿ ಜಾಥಾ

ಇದೇ 28ರಂದು ರಾಮನಗರದಲ್ಲಿ ಚಾಲನೆ l ನ. 13ರಂದು ಚಾಮರಾಜನಗರದಲ್ಲಿ ಸಮಾರೋಪ
Last Updated 13 ಸೆಪ್ಟೆಂಬರ್ 2022, 6:11 IST
ಅಕ್ಷರ ಗಾತ್ರ

ರಾಮನಗರ: ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹಾಗೂ ಸಂವಿಧಾನ ಉಳಿವಿಗಾಗಿ ಜನಜಾಗೃತಿ ಮೂಡಿಸಲು ರಾಮನಗರದಿಂದ ಚಾಮರಾಜನಗರದವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ಜಾಗೃತಿ ಜಾಥಾ ನಡೆಸುತ್ತಿದೆ ಎಂದು ಪಕ್ಷದ ರಾಜ್ಯ ಸಂಯೋಜಕ ಉಸ್ತುವಾರಿ ಗೋಪಿನಾಥ್ ತಿಳಿಸಿದರು.

‘ಜನಪರ ಕಾರ್ಯಕ್ರಮಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಕೆಲವರು ಕಿಡ್ನಿ ಮಾರಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆಲವರ ಬಳಿ ಸಾವಿರಾರು ಕೋಟಿ ಮೌಲ್ಯದ ಬೇನಾಮಿ ಆಸ್ತಿ ಇದ್ದರೂ, ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಬದಲಿಗೆ ಭಾವನಾತ್ಮಕವಾಗಿ ವಿಷಯಗಳನ್ನು ಮುಂದಿಟ್ಟುಕೊಂಡು ಆಡಳಿತ ನಡೆಸುತ್ತಿದೆ. ಇದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ಅವಮಾನ ಮಾಡಿದ ನ್ಯಾಯಾಧೀಶರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಧಾರ್ಮಿಕ ಪರಿಪಾಲನೆ ಮಾಡುತ್ತಿಲ್ಲ. ಯಾವು
ದೊಂದು ಸರ್ಕಾರದ ಹಿಡಿತದಲ್ಲಿ ಇಲ್ಲ. ಈ ವೈಫಲ್ಯ ಖಂಡಿಸಿ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ’ ಎಂದರು.

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಜಾಥಾವು ರಾಮನಗರದಿಂದ ಇದೇ 28ರಿಂದ ಯಾತ್ರೆ ಪ್ರಾರಂಭವಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಚಾಮರಾಜನಗರದಲ್ಲಿ ನವೆಂಬರ್‌ 13ರಂದು ಸಮಾರೋಪ ಸಮಾವೇಶ ನಡೆಯಲಿದೆ. ಸರ್ಕಾರದ ನಡೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳು, ಒಬಿಸಿ ಮತ್ತು ಮುಸಲ್ಮಾನ ಬಾಂಧವರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗುತ್ತದೆ ಎಂದು ವಿವರಿಸಿದರು.

ಬಿಎಸ್‌ಪಿ ರಾಜ್ಯ ಪ್ರದಾನ ಕಾರ್ಯದರ್ಶಿ ಆರ್. ಮುನಿಯಪ್ಪ, ಕಾರ್ಯದರ್ಶಿ ಎಂ. ನಾಗೇಶ್, ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ಅಬ್ದುಲ್ ಕಹೀಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಾಚಲ, ಜಿಲ್ಲಾ ಕಾರ್ಯದರ್ಶಿ ಮುರುಗೇಶ್, ಜಿಲ್ಲಾ ಸಂಯೋಜಕ ಅಶ್ವಥ್, ರಾಮನಗರ ಘಟಕದ ಅಧ್ಯಕ್ಷ ಸ್ವಾಮಿ, ಮಹಿಳಾ ಘಟಕ ಅಧ್ಯಕ್ಷೆ ಅನು, ಪದಾಧಿಕಾರಿಗಳಾದ ಬಸವಮಾದಮ್ಮ, ಕುರುಪೇಟೆ ರಾಮಚಂದ್ರಣ್ಣ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT