ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮದಲ್ಲಿ ದೇಗುಲ ಬದಲು ಶಾಲೆ ನಿರ್ಮಿಸಿ’

Last Updated 14 ನವೆಂಬರ್ 2019, 13:05 IST
ಅಕ್ಷರ ಗಾತ್ರ

ಬಿಡದಿ: ದೇಶದ ಉಜ್ಜಲ ಭವಿಷ್ಯ ಕಟ್ಟಿಕೊಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ ಎಂದು ಶಾಸಕ ಎ.ಮಂಜುನಾಥ್ ಅಭಿಪ್ರಾಯಪಟ್ಟರು.

ಬಿಡದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಟೊಯೋಟ ಮೋಟಾರ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದಡಿ ₹3ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡವನ್ನು ಮಕ್ಕಳ ದಿನಾಚಾರಣೆ ಅಂಗವಾಗಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಅವಶ್ಯ ಇರುವ ಆಧುನಿಕ ಸೌಲಭ್ಯ ಮತ್ತು ಸುಸಜ್ಜಿತ ಪರಿಸರ ನಿರ್ಮಾಣಕ್ಕೆ ಸ್ಥಳೀಯ ಕಾರ್ಖಾನೆಗಳು ಕೈಜೋಡಿಸಿವೆ. ಸ್ವಚ್ಛತೆ, ಆರೋಗ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಮೂಲಕ ಪ್ರಮುಖ ಪಾತ್ರ ವಹಿಸಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಟೊಯೋಟಾ ಕಂ‍‍ಪನಿ ₹ 3ಕೋಟಿ ವೆಚ್ಚದಲ್ಲಿ 9 ಕೊಠಡಿಗಳ ಅಡುಗೆ ಮನೆ, ಶೌಚಾಲಯ, ವಿದ್ಯಾರ್ಥಿಗಳ ಅನುಕೂಲಕ್ಕೆ ಪೀಠೋಪಕರಣ ಕೊಠಡಿ ನಿರ್ಮಿಸಿಕೊಟ್ಟಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ಒಂದು ಗ್ರಾಮದಲ್ಲಿ ದೇವಾಲಯ ನಿರ್ಮಾಣ ಮಾಡುವ ಬದಲು ಒಂದು ಶಾಲೆ ಮತ್ತು ಆಸ್ಪತ್ರೆ ನಿರ್ಮಾಣ ಮಾಡುವ ಅವಶ್ಯ ಇದೆ. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಕ್ಕರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಲಿದ್ದಾರೆ ಎಂದು ತಿಳಿಸಿದರು.

ಕೈಗಾರಿಕೆ ಸಂಘದ ಅಧ್ಯಕ್ಷ ಡಾ.ರಾಜೇಂದ್ರಹೆಗ್ಡೆ, ಟಿಕೆಎಂ ಹಿರಿಯ ಉಪಾಧ್ಯಕ್ಷ ತುಕುಯ ನಕನಿಶಿ, ಟಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ನವೀನ್ ಸೋನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜು, ಜಿಲ್ಲಾ ಪಂಚಾಯಿತಿ ಸಿಇಒ ಮಹಮದ್ ಇಕ್ರಮುಲ್ಲಾ ಷರೀಪ್, ಬಿಇಒ ಮರೀಗೌಡ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ ನಾರಾಯಣಸ್ವಾಮಿ, ಪುರಸಭೆ ಸದಸ್ಯರಾದ ಉಮೇಶ್, ಲೋಕೇಶ್, ರಾಕೇಶ್, ದೇವರಾಜು, ಮಹೀಪತಿ, ಪುಟ್ಟಮಾದಯ್ಯ, ಮುಖ್ಯಾಧಿಕಾರಿ ಚೇತನ್ ಕೊಳವಿ ಎಸ್. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT