ಮಾಗಡಿ: ಬಸವಣ್ಣ ಅವರ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ಎಲ್ಲ ಅಧಿಕಾರಿಗಳು ಕೈಜೋಡಿಸಿದರೆ ಸಮಾಜವನ್ನು ಸರಿದಾರಿಗೆ ತರಬಹುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಪಟ್ಟಣದ ಕೋಟೆ ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಾತ್ಮ ಗಾಂಧಿ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ತಂದರು. ನಂತರ ವಿವಿಧ ಜಾತಿ, ವರ್ಗಗಳು ಸೇರಿ ಸಂವಿಧಾನ ರಚಿಸಲು ಸಂವಿಧಾನ ಸಭೆ ರಚಿಸಲಾಯಿತು. ಸರ್ದಾರ್ ವಲ್ಲಭಭಾಯ್ ಪಟೇಲ್ ಒಕ್ಕೂಟ ರಾಜ್ಯಗಳನ್ನು ಒಗ್ಗೂಡಿಸಿದರು. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಬಸವಣ್ಣ ಅವರ ಸಮ ಸಮಾಜ ನಿರ್ಮಾಣದ ಆಶಯದಂತೆ ಬಡವ-ಬಲ್ಲಿದರ ಭೇದವಿಲ್ಲದೆ ಎಲ್ಲರೂ ಸಮಾನರಾಗಿರಬೇಕೆಂಬ ನಿಟ್ಟಿನಲ್ಲಿ ಸಂವಿಧಾನ ರಚನೆಯಾಗಿದೆ. ಆದರೆ, ಬಸವಣ್ಣ ಅವರ ಆಶಯ ಇನ್ನೂ ಈಡೇರಿಲ್ಲ. ತಾರತಮ್ಯ ಇನ್ನೂ ಮುಂದುವರಿದಿದೆ ಎಂದರು.

ಪ್ರಭಾರ ತಹಶೀಲ್ದಾರ್ ಆರ್.ಪ್ರತಿಭಾ ಮಾತನಾಡಿ, ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿ ಶ್ರೇಷ್ಠ ಸಂವಿಧಾನ ರಚಿಸಿದರು. ಸಂವಿಧಾನ ರಚನೆಗೆ ಎರಡು ವರ್ಷ, 11 ತಿಂಗಳು ಮತ್ತು 11 ಅಧಿವೇಶನಗಳ ಕಾಲಾವಧಿ ಬೇಕಾಯಿತು. ಭಾರತೀಯರಿಗೆ ಜವಾಬ್ದಾರಿಯುತ ಹಕ್ಕುಗಳನ್ನು ಸಂವಿಧಾನ ನೀಡುತ್ತದೆ. ಸಂವಿಧಾನ ಶಾಸನ ರಚಿಸಿಕೊಂಡು, 560 ಭಾಗಗಳನ್ನು ಸರ್ದಾರ್ ವಲ್ಲಭಭಾಯ್ ಪಟೇಲ್ ಒಗ್ಗೂಡಿಸಿದರು. ‘ದೇಶ ನಮಗೇನು ನೀಡಿದೆ ಎನ್ನುವ ಬದಲು. ದೇಶಕ್ಕೆ ನಾವೇನು ಕೊಡುಗೆ ನೀಡಿದ್ದೇವೆ ಎಂಬುದು ತಿಳಿಯಬೇಕು. ದೇಶ ವಿಶ್ವ ಗುರುವಾಗಿ ಬೆಳೆಯಬೇಕು‘ ಎಂದು ಹಾರೈಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ಪಥ ಸಂಚಲನ ಮತ್ತು ದೇಶಭಕ್ತಿ ಗೀತೆಗಳ ಪ್ರಸ್ತುತಿ ನಡೆಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ತಾಲ್ಲೂಕು ಆಡಳಿತ ಸತ್ಕರಿಸಿತು. ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕಿನಲ್ಲೇ ಅತಿ ಹೆಚ್ಚು ಅಂಕಗಳಿಸಿದ ಐದು ವಿದ್ಯಾರ್ಥಿಗಳಿಗೆ ಸರ್ಕಾರದ ₹50 ಸಾವಿರ ನಗದು ಬಹುಮಾನ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ಬ್ಲಾಕ್ ಶಿಕ್ಷಣ ಅಧಿಕಾರಿ ಚಂದ್ರಶೇಖರ್, ಡಿವೈಎಸ್ಪಿ ರವಿ, ಆರಕ್ಷಕ ನಿರೀಕ್ಷಕ ಜಿ.ವೈ.ಗಿರಿರಾಜ್, ಕಸಾಪ ಅಧ್ಯಕ್ಷ ತಿ.ನಾ.ಪದ್ಮನಾಭ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಜಯರಾಮ್, ಇಸಿಒ ಗಂಗಾಧರ್, ನಾರಾಯಣ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಸವಣ್ಣನವರ ಆಶಯದಂತೆ ಸರಿ ಸಮಾಜ ನಿರ್ಮಾಣ ಮಾಡಲು ಎಲ್ಲಾ ಅಧಿಕಾರಿಗಳು ಕೈಜೋಡಿಸಿದರೆ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡಬಹುದು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಪಟ್ಟಣದ ಕೋಟೆ ಮೈದಾನದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ರವರು ಅಹಿಂಸೆ ಮೂಲಕ ಸ್ವತಂತ್ರ ತಂದು ಕೊಟ್ಟರು ನಂತರ ವಿವಿಧ ಜಾತಿಗಳು ವಿವಿಧ ವರ್ಗಗಳು ಭಾರತದ ಸಂವಿಧಾನ ರಚನೆ ಮಾಡಲು ಸಂವಿಧಾನ ಪಿಟಿಕೆ ಹಾಕಿ ಸರ್ದಾರ್ ವಲ್ಲಭಾಯಿ ಪಟೇಲ್ ರವರು ಒಕ್ಕೂಟ ರಾಜ್ಯಗಳನ್ನು ಒಗ್ಗೂಡಿಸಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದರು ಬಸವಣ್ಣನವರ ಸಮ ಸಮಾಜ ನಿರ್ಮಾಣ ಮೂಲಕ ಬಡವರು ಬಲ್ಲಿದರು ಎಂಬ ಭೇದವಿಲ್ಲದೆ ಎಲ್ಲರೂ ಸಮಾನನಾಗಿ ಇರಬೇಕೆಂಬ ನಿಟ್ಟಿನಲ್ಲಿ ನಮ್ಮ ಸಂವಿಧಾನ ರಚನೆಯಾಗಿದ್ದು ಇನ್ನೂ ಕೂಡ ಬಸವಣ್ಣನವರ ಆಶಯ ಈಡೇರಿಲ್ಲ ತಾರತಮ್ಯ ಇನ್ನೂ ಕೂಡ ಮುಂದುವರೆದಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ಕೊಡಲಾಗುತ್ತಿದೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪ್ರತಿಯೊಬ್ಬರಿಗೂ ಸೌಲಭ್ಯಗಳು ಸಿಗುವ ಕೆಲಸ ಆಗಲಿದೆ ಕೇವಲ ಭಾಷಣಕ್ಕೆ ಸೀಮಿತವಾಗದೆ ಕಾರ್ಯರೂಪಕ್ಕೆ ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಸಂವಿಧಾನ ಸದೃಢ ಹೋಗಿದ್ದು ಪ್ರತಿಯೊಬ್ಬರೂ ಇಲ್ಲಿ ಬದುಕುವ ಹಕ್ಕನ್ನು ನೀಡಲಾಗಿದ್ದು ನಮ್ಮ ಸರ್ಕಾರ ಬಡವರ ಪರವಾಗಿ ನಿಂತಿದೆ ಎಂದು ತಿಳಿಸಿದರು.

ಪ್ರಭಾರಿ ತಹಸಿಲ್ದಾರ್ ಆರ್. ಪ್ರತಿಭಾ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ರವರು ಕರಡು ಸಮಿತಿ ಅಧ್ಯಕ್ಷರಾಗಿ ಶ್ರೇಷ್ಠ ಸಂವಿಧಾನ ರಚನೆ ಮಾಡಲಾಯಿತು ಸಂವಿಧಾನ ರಚನೆಗೆ ಎರಡು ವರ್ಷ 11 ತಿಂಗಳ ಕಾಲ 11 ಅಧಿವೇಶನದ ಫಲವಾಗಿ ಸಂವಿಧಾನ ರಚನೆಯಾಗಿದ್ದು ಭಾರತೀಯರಿಗೆ ಜವಾಬ್ದಾರಿಯ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಗಿದೆ ಸಂವಿಧಾನ ಶಾಸನ ರಚನೆ ಮಾಡಿಕೊಂಡು 560 ಭಾಗಗಳನ್ನು ಸರ್ದಾರ್ ವಲ್ಲಭಾಯಿ ಪಟೇಲ್ ಒಗ್ಗೂಡಿಸಿ ಒಳ್ಳೆಯ ಕೆಲಸ ಮಾಡಿದ್ದು ದೇಶ ನಮಗೇನು ನೀಡಿದೆ ಎನ್ನುವ ಬದಲು ದೇಶಕ್ಕೆ ನಾವೇನು ಕೊಡುಗೆ ಕೊಟ್ಟಿದ್ದೇವೆ ಎಂಬುದು ತಿಳಿಯಬೇಕು ನಮ್ಮ ದೇಶ ವಿಶ್ವ ಗುರುವಾಗಿ ಬೆಳೆಯಬೇಕು ಎಂದು ಹಾರೈಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ಪತಸಂಚಲನ ಹಾಗೂ ದೇಶಭಕ್ತಿ ಗೀತೆಗೆ ವೃತ್ತಿಯ ಮಾಡುವ ಮೂಲಕ ಎಲ್ಲರ ಗಮನ ಸೆಳೆಯಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ತಾಲ್ಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.

ಸರ್ಕಾರಿ ಶಾಲೆಯಲ್ಲಿ ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ಐದು ಜನ ವಿದ್ಯಾರ್ಥಿಗಳಿಗೆ ಸರ್ಕಾರ ವತಿಯಿಂದ ನೀಡಲಾದ 50 ಸಾವಿರ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ತಾ.ಪಂ.ಇಒ ಜೈಪಾಲ್, ಬಿಇಒ ಚಂದ್ರಶೇಖರ್ ಡಿವೈಎಸ್ ಪಿ ರವಿ, ಆರಕ್ಷಕ ನಿರೀಕ್ಷಕ ಜಿ.ವೈ.ಗಿರಿರಾಜ್, ಕಸಾಪ ಅಧ್ಯಕ್ಷ ತಿ.ನಾ.ಪದ್ಮನಾಭ, ಸರ್ಕಾರಿ ನೌಕರ ಸಂಘದ ತಾಲ್ಲೂಕ ಅಧ್ಯಕ್ಷ ಜಯರಾಮ್, ಇಸಿಒ ಗಂಗಾಧರ್, ನಾರಾಯಣ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.