ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಯಕ್ಕೆ ಬಾರದ ಬಸ್‌: ಪ್ರಯಾಣಿಕರ ಪರದಾಟ

Published 28 ಫೆಬ್ರುವರಿ 2024, 7:50 IST
Last Updated 28 ಫೆಬ್ರುವರಿ 2024, 7:50 IST
ಅಕ್ಷರ ಗಾತ್ರ

ಮಾಗಡಿ: ಪಟ್ಟಣದಿಂದ ಬೆಂಗಳೂರಿಗೆ ಹೋಗಿ ಬರುವ ಪ್ರಯಾಣಿಕರಿಗೆ ಸಮಯಕ್ಕೆ ಸರಿಯಾಗಿ ಬಸ್‌ ಸೇವೆ ಇಲ್ಲದೆ ಜನರು  ಪರದಾಡುವಂತಾಗಿದೆ.

ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೊ ಇದ್ದರೂ ಹಳೆಯ ಬಸ್‌ಗಳು ತುಂಬಿವೆ. ಮಾಗಡಿಯಿಂದ ಪ್ರತಿನಿತ್ಯ ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ನೂರಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ.

ವರ್ತಕರು, ರೇಷ್ಮೆ ಹುರಿ ಕಾರ್ಖಾನೆಗೆ ಕಚ್ಚಾ ನೂಲು ತರುವವರು, ಹೂವು ಹಣ್ಣು, ತರಕಾರಿ ಮಾರಾಟಗಾರರು ಸರ್ಕಾರಿ ಬಸ್‌ಗಳನ್ನೇ ಆಶ್ರಯಿಸಿದ್ದಾರೆ. ಬಸ್‌ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯ್ದರೂ ಸಮಯಕ್ಕೆ ಸರಿಯಾಗಿ ಬಸ್‌ ಬರುವುದಿಲ್ಲ.

‘ಸಮಯಕ್ಕೆ ಸರಿಯಾಗಿ ಬಸ್‌ ಓಡಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವು ಭಾರಿ ಮನವಿ ಸಲ್ಲಿಸಿದ್ದೇವೆ. ಹೋರಾಟ ಮಾಡಿದ್ದೇವೆ. ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ’ ಎಂದು ಮರಳದೇವನಪುರದ ವಿದ್ಯಾರ್ಥಿ ರವಿಕಿರಣ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT