ಸೋಮವಾರ, ಏಪ್ರಿಲ್ 6, 2020
19 °C

ಬಸ್ ಸಂಚಾರ ಸ್ಥಗಿತ: ಜನರ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸಾರ್ವಜನಿಕರು ಪರದಾಡುವಂತೆ ಆಗಿದೆ.

ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ಗಳ ಸಂಚಾರ ವಿರಳವಾಗಿದೆ. ಇದರಿಂದಾಗಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆಯು ಕಡಿಮೆ ಇದೆ. ಖಾಸಗಿ ಟ್ಯಾಕ್ಸಿ , ಟೆಂಪೊ ಟ್ರಾವೆಲ್ಲರ್ ವಾಹನಗಳು ರಸ್ತೆಗೆ ಇಳಿದಿದ್ದು, ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿವೆ. 

ಕೃಷಿ ಉತ್ಪನ್ನ ಹಾಗೂ ರೇಷ್ಮೆಗೂಡು ಮಾರುಕಟ್ಟೆಗಳು ತೆರೆದಿದ್ದು, ಜನಸಂದಣಿ ಹೆಚ್ಚಿದೆ. ಸರ್ಕಾರಿ‌ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು