ಬಿಡದಿ: ಬೈರಮಂಗಲ ಟೌನ್ಶಿಪ್ ಯೋಜನೆ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸಿದರು.

ಅಬ್ಬನಕುಪ್ಪೆ ಬಿಎಂಟಿಸಿ ಡಿಪೊ ಬಳಿಯಿಂದ ಯಾತ್ರೆ ಮೂಲಕ ಪ್ರಾರಂಭವಾದ ಮೆರವಣಿಗೆ ಬೈರಮಂಗಲ ವೃತ್ತದವರೆಗೆ ನಡೆಯಿತು. ಸುಮಾರು 3 ಕಿ.ಮೀವರೆಗೆ ಕಾರ್ಯಕರ್ತರು ಕೆಂಪು ಮತ್ತು ಹಸಿರು ಬಾವುಟ ಹಿಡಿದು ಹೆಜ್ಜೆ ಹಾಕಿದರು.

ಸರ್ಕಾರ ರೈತರ ಪ್ರತಿಭಟನೆಗೆ ಬೆಲೆ ನೀಡದೆ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದೆ. ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಟೌನ್ಶಿಪ್ ಯೋಜನೆಯು ರಿಯಲ್ ಎಸ್ಟೇಟ್ ಹಿತಾಸಕ್ತಿಯ ಕಾರ್ಪೋರೇಟ್ ಭೂ ಕಬಳಿಕೆ ಉದ್ದೇಶವಾಗಿದೆ. ಇದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಕೇವಲ ಭೂಮಿಗಾಗಿ ನಡೆಸುತ್ತಿರುವ ಹೋರಾಟವಾಗದೆ ಇಡೀ ದೇಶದ ಆಹಾರ ಭದ್ರತೆ ಹಾಗೂ ಕೃಷಿ ಉಳಿವಿಗಾಗಿ ಮತ್ತು ಜೀವ ಪರಿಸರ ಸುಸ್ತಿರಕ್ಕಾಗಿ ನಡೆಸುತ್ತಿರುವ ಹೋರಾಟವಾಗಿದೆ. ಸರ್ಕಾರ ಯೋಜನೆ ಕೈಬಿಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬೈರಮಂಗಲ ಮತ್ತು ಹೊಸೂರು ವೃತ್ತದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭಾ ರಾಷ್ಟ್ರೀಯ ಸಹ ಕಾರ್ಯದರ್ಶಿ ಡಿ.ರವಿಂದ್ರನ್, ಕಳೆದ 438 ದಿನಗಳಿಂದ ರೈತರು ರಾತ್ರಿ ಹಗಲು ಎನ್ನದೆ ಹೋರಾಟ ನಡೆಸುತ್ತಿದ್ದಾರೆ. ಪಂಚೇಂದ್ರಿಯಗಳನ್ನು ಕಳೆದುಕೊಂಡಿರುವ ರಾಜ್ಯ ಸರ್ಕಾರಕ್ಕೆ ರೈತರ ಸಂಕಷ್ಟ ಗೊತ್ತಾಗುತ್ತಿಲ್ಲ. ಈ ಸರ್ಕಾರವನ್ನು ಎಚ್ಚರಿಸಲು ಹೋರಾಟವನ್ನು ಬೈರಮಂಗಲ ವೃತ್ತದಿಂದ ವಿಧಾನಸೌಧಕ್ಕೆ ಸ್ಥಳಾಂತರ ಮಾಡೋಣ ಎಂದು ಹೇಳಿದರು.

ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ವರಲಕ್ಷ್ಮಿ ಮಾತನಾಡಿ, ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ರೈತರ ಘನತೆ ಮತ್ತು ಸಮಾನತೆ ಬದುಕಿಗೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಜನರಿಗಾಗಿ ಇರಬೇಕು. ಆದರೆ, ಸರ್ಕಾರ ರೈತರನ್ನು ದೂರವಿಟ್ಟು ಬಂಡವಾಳಶಾಹಿ ಅಭಿವೃದ್ಧಿ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಕೆಐಎಡಿಬಿ ಮೂಲಕ ರಾಜ್ಯದಲ್ಲಿ 1ಲಕ್ಷ 62 ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ ಸಾಕಷ್ಟು ಭೂಮಿ ಖಾಲಿ ಬಿದ್ದಿದೆ. ಅಭಿವೃದ್ಧಿ ಹೆಸರಿನಲ್ಲಿ ಬೈರಮಂಗಲ-ಕಂಚುಗಾರನಹಳ್ಳಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೊಸ ಅಧಿಸೂಚನೆ ಏಕೆ ಹೊರಡಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಕರ್ನಾಟಕ ಪ್ರಾಂತ ರೈತಸಂಘ ರಾಜ್ಯ ಘಟಕದ ಅಧ್ಯಕ್ಷ ಯು.ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್, ಸಹ ಕಾರ್ಯದರ್ಶಿ ಎನ್.ಭರತ್ ರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್.ಅಂಕಪ್ಪ, ರೈತ ಹೋರಾಟಗಾರ್ತಿ ಪ್ರಭಾ ಬೆಳವಾಡಿ, ಬೈರಮಂಗಲ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ರೈತರ ಭೂ ಹಿತರಕ್ಷಣಾ ಸಂಘದ ಅಧ್ಯಕ್ಷ ರಾಮಯ್ಯ, ಮುಖಂಡರಾದ ಪ್ರಕಾಶ್, ನಾಗರಾಜು, ನಾಗೇಶ್ ಶ್ರೀನಿವಾಸರೆಡ್ಡಿ, ಕೃಷ್ಣ, ಮಂಜುನಾಥ್, ಕುಮಾರಸ್ವಾಮಿ, ಚೀಲೂರು ಮುನಿರಾಜು, ರೈತ ಮಹಿಳೆಯರಾದ ಭಾಗ್ಯ ನಾಗರಾಜು, ಜಯಮ್ಮ, ಸುಮಾ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.